ಮುಂಬೈನಲ್ಲಿ ವಸತಿ ಕಟ್ಟಡ ಕುಸಿದು 11 ಮಂದಿ ಸಾವು

MUmabi--01

ಮುಂಬೈ, ಜು.25- ಮುಂಬೈನ ಸಬ್‍ಅರ್ಬನ್ ಘಾಟ್ಕೋಪರ್‍ನಲ್ಲಿ ಇಂದು ಬೆಳಗ್ಗೆ ನಾಲ್ಕು ಅಂತಸ್ತುಗಳ ವಸತಿ ಕಟ್ಟಡವೊಂದು ಕುಸಿದು 11 ಮಂದಿ ಮೃತಪಟ್ಟಿದ್ದಾರೆ. ಉರುಳಿಬಿದ್ದ ಕಟ್ಟಡದ ಅವಶೇಷಗಳಡಿ ಸುಮಾರು 40 ಮಂದಿ ಸಿಲುಕಿದ್ದು, ಕೆಲವರು ಬದುಕುಳಿದಿರುವ ಸಾಧ್ಯತೆ ಕ್ಷೀಣಿಸಿದೆ ಎಂದು ಬೃಹನ್ ಮುಂಬೈ ನಗರ ಪಾಲಿಕೆ ಅಧಿಕಾರಿಗಳು ಹೇಳಿದ್ದಾರೆ.  ಈ ದುರಂತದಲ್ಲಿ ಸಾವು-ನೋವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಬಗ್ಗೆ ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಘಾಟ್ಕೋಪರ್‍ನ ದಾಮೋದರ್ ಪಾರ್ಕ್ ಪ್ರದೇಶದಲ್ಲಿ ಬೆಳಗ್ಗೆ 10.30ರಲ್ಲಿ ಈ ದುರಂತ ಸಂಭವಿಸಿದೆ. ಸುದ್ದಿ ತಿಳಿದ ಕೂಡಲೇ ಎಂಟು ಅಗ್ನಿಶಾಮಕ ವಾಹನಗಳು, ಹಾಗೂ ಆಂಬ್ಯುಲೆನ್ಸ್ ಸ್ಥಳಕ್ಕೆ ಧಾವಿಸಿದವು. ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆ ಮುಂದುವರಿದಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin