ಶಸ್ತ್ರಾಸ್ತ್ರಗಳ ಕೊರತೆ ಇಲ್ಲ, ರಕ್ಷಣಾ ಸಚಿವ ಜೇಟ್ಲಿ ಸ್ಪಷ್ಟನೆ

Arun-jaitly

ನವದೆಹಲಿ, ಜು.25- ದೇಶದ ಸಾರ್ವಭೌಮತ್ವವನ್ನು ರಕ್ಷಿಸಿಕೊಳ್ಳಲು ನಮ್ಮ ಸೇನಾಪಡೆಗಳು ಸಮರ್ಥವಾಗಿವೆ ಎಂದು ಹೇಳಿರುವ ರಕ್ಷಣಾ ಸಚಿವ ಅರುಣ್ ಜೇಟ್ಲಿ ಸಶಸ್ತ್ರ ಪಡೆಗಳಲ್ಲಿ ಸಾಕಷ್ಟು ಶಸ್ತ್ರಾಸ್ತ್ರಗಳಿದ್ದು, ಯಾವುದೇ ಪರಿಸ್ಥಿತಿ ಎದುರಿಸಲು ಸಂಪೂರ್ಣ ಸನ್ನದ್ಧವಾಗಿವೆ ಎಂದು ಸ್ಪಷ್ಟಪಡಿಸಿದ್ದಾರೆ. 10 ದಿನಗಳ ನಿರಂತರ ಯುದ್ಧವಾದರೆ ಭಾರತದ ಸೇನೆಯಲ್ಲಿರುವ ಎಲ್ಲ ಶಸ್ತ್ರಾಸ್ತ್ರಗಳು ಖಾಲಿಯಾಗುತ್ತವೆ ಎಂಬ ನಿಯಂತ್ರಕರು ಮತ್ತು ಮಹಾಲೇಖಪಾಲಕರು (ಸಿಎಜಿ) ವರದಿಯನ್ನು ಪ್ರಸ್ತಾಪಿಸಿ ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳು ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದರು.

ಸಿಎಜಿ ವರದಿಯು ನಮ್ಮಲ್ಲಿರುವ ಶಸ್ತ್ರಾಸ್ತ್ರಗಳ ಕೊರತೆ ಬಗ್ಗೆ ತಿಳಿಸಿದೆ. ಆದರೆ, ಇದರಿಂದ ದೇಶದ ರಕ್ಷಣೆಗೆ ಯಾವುದೇ ಗಂಡಾಂತರವಿಲ್ಲ ಮತ್ತು ಈ ವಿಷಯದಲ್ಲಿ ಆತಂಕ ಪಡುವ ಅಗತ್ಯವೂ ಇಲ್ಲ ಎಂದು ಸದನಕ್ಕೆ ಅರುಣ್ ಜೇಟ್ಲಿ ಭರವಸೆ ನೀಡಿದರು.  ರಾಷ್ಟ್ರದ ಸಾರ್ವಭೌಮತ್ವವನ್ನು ರಕ್ಷಿಸಲು ನಾವು ಸಮರ್ಥರಾಗಿದ್ದೇವೆ. ನಮ್ಮ ಸೇನಾಪಡೆಗಳ ಬಳಿ ಸಾಕಷ್ಟು ಶಸ್ತ್ರಾಸ್ತ್ರಗಳಿವೆ. ಅಲ್ಲದೆ, ಯಾವುದೇ ಪರಿಸ್ಥಿತಿ ನಿಭಾಯಿಸಲು ಸಂಪೂರ್ಣ ಸರ್ವಸನ್ನದ್ಧವಾಗಿದೆ ಎಂದು ರಕ್ಷಣಾ ಸಚಿವರು ತಿಳಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin