ಗೃಹ ಖಾತೆ ನೀಡಿದರೆ ಸಮರ್ಪಕವಾಗಿ ನಿಭಾಯಿಸುತ್ತೇನೆ : ರಮಾನಾಥ ರೈ

Ramanath-Rain

ಬೆಂಗಳೂರು,ಜು.26- ರಾಜ್ಯ ಸರ್ಕಾರ ಗೃಹ ಖಾತೆ ನೀಡಿದರೆ ಸಮರ್ಪಕವಾಗಿ ನಿಭಾಯಿಸುವುದಾಗಿ ಅರಣ್ಯ ಸಚಿವ ರಮಾನಾಥ ರೈ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಹಲವು ಖಾತೆ ನಿರ್ವಹಿಸಿದ ಅನುಭವವಿದೆ. ನನ್ನ ಮೇಲೆ ಭರವಸೆ ಇಟ್ಟು ಗೃಹಖಾತೆ ನೀಡಿದರೆ ಅದನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸುವುದಾಗಿ ಹೇಳಿದ್ದಾರೆ.

ಗೃಹ ಖಾತೆ ನೀಡುವ ಬಗ್ಗೆ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆ ಚರ್ಚೆ ನಡೆಸಿರುವುದು ನಿಜ. ಒಂದು ವೇಳೆ ಆ ಖಾತೆ ನೀಡಿದರೆ ಸಮರ್ಪಕವಾಗಿ ನಿರ್ವಹಿಸಲು ಸಿದ್ಧರಾಗಿರಿ ಎಂದು ಸೂಚನೆ ನೀಡಿರುವುದಾಗಿ ತಿಳಿಸಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಕೋಮು ಗಲಭೆ ವಿಚಾರದಲ್ಲಿ ಬಿಜೆಪಿಯವರು ನನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ. ಪದೆ ಪದೇ ಸುಳ್ಳು ಆರೋಪ ಮಾಡುವುದು ಬಿಜೆಪಿಯವರ ಜಾಯಮಾನವಾಗಿದೆ ಎಂದು ವಾಗ್ದಾಳಿ ನಡೆಸಿದರು.
ರಮಾನಾಥ ರೈ ಅವರಿಗೆ ಗೃಹಖಾತೆ ನೀಡಿದರೆ ಕರಾವಳಿ ಭಾಗದಲ್ಲಿ ಕೋಮು ಗಲಭೆ ನಿಯಂತ್ರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಲೋಚಿಸಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಹೀಗಾಗಿ ಈ ಬಗ್ಗೆ ಹೈಕಮಾಂಡ್ ಜತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin