‘ಜಮೀರ್ ಅಹಮದ್ ಒಬ್ಬ ಮುಸ್ಲಿಂ ವಿರೋಧಿ’

ಈ ಸುದ್ದಿಯನ್ನು ಶೇರ್ ಮಾಡಿ

Jameer--01

ತುಮಕೂರು, ಜು.26-ಜೆಡಿಎಸ್ ಚಿಹ್ನೆಯಿಂದ ಗೆದ್ದು ಶಾಸಕರಾಗಿ ಕಾಂಗ್ರೆಸ್ ಪರ ಮಾತನಾಡುತ್ತಿರುವ ಜಮೀರ್ ಅಹಮದ್ ಒಬ್ಬ ಮುಸ್ಲಿಂ ವಿರೋಧಿ ಎಂದು ಜಿಲ್ಲಾ ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಮಹಾಪ್ರಧಾನ ಕಾರ್ಯದರ್ಶಿ ಡಾ.ಇಂತಿಯಾಜ್ ಅಹಮದ್ ಟೀಕಿಸಿದರು. ನಗರದ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ನಡೆದ ಅಲ್ಪಸಂಖ್ಯಾತರ ಸಭೆಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯದ ಜೆಡಿಎಸ್ ಅಭ್ಯರ್ಥಿ ಬಿ.ಎಂ.ಫಾರೂಕ್ ಅವರಿಗೆ ಮತ ನೀಡದೆ ಜೆಡಿಎಸ್ ಶಾಸಕರಾಗಿಯೂ ಕಾಂಗ್ರೆಸ್ ಅಭ್ಯರ್ಥಿಗೆ ಮತ ಚಲಾಯಿಸಿ ಜಮೀರ್ ಅಹಮ್ಮದ್ ಮುಸ್ಲಿಂ ವಿರೋಧಿಯಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಜಿಲ್ಲೆಯ ಎಲ್ಲಾ 11 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲ್ಲಿಸುತ್ತೇನೆ ಎಂದು ಜಮೀರ್ ಹೇಳಿರುವುದು ತಿರುಕನ ಕನಸು, ಕೆಪಿಸಿಸಿ ಅಧ್ಯಕ್ಷರಾದ ಡಾ.ಜಿ.ಪರಮೇಶ್ವರ್ ಅವರೇ ತಮ್ಮ ಸ್ವಕ್ಷೇತ್ರದಲ್ಲಿ ಪರಾಭವಗೊಂಡಿದ್ದಾರೆ. ಅಂತಹುದರಲ್ಲಿ ಬೆಂಗಳೂರಿನಿಂದ ತುಮಕೂರಿಗೆ ಬಂದು ತುಮಕೂರು ಜಿಲ್ಲೆಯ 11 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಿಸುತ್ತೇನೆ ಎಂದು ಹೇಳಿರುವುದು ಹಾಸ್ಯಾಸ್ಪದ ಎಂದರು. ಸಭೆಯಲ್ಲಿ ಮುಖಂಡರಾದ ಮಹಮದ್ ಇಕ್ಬಾಲ್, ಸುಲ್ತಾನ್ ಅಹಮದ್, ನಜೀರ್‍ಬೇಗ್ ಮತ್ತಿತರರು ಜಮೀರ್ ಅಹಮದ್ ಹೇಳಿಕೆ ಖಂಡಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin