ಜೈಲು ಅವ್ಯವಹಾರದಲ್ಲಿ ಭಾಗಿಯಾಗಿದ್ದರೆ ಅಧಿಕಾರಿಗಗಳಿಗೆ ಶಿಕ್ಷೆ ಆಗಲೇಬೇಕು : ಸಾಂಗ್ಲಿಯಾನ

Sangliyana--01

ದಾವಣಗೆರೆ,ಜುಲೈ26- ಬೆಂಗಳೂರು ಪರಪ್ಪನ ಆಗ್ರಹಾರ ಕೇಂದ್ರಕಾರಾಗೃಹ ಸೇರಿದಂತೆ ರಾಜ್ಯದ ವಿವಿಧ ಭಾಗದ ಜೈಲಿನಲ್ಲಿ ಅವ್ಯವಹಾರ ನಡೆದಿದ್ದು, ಪ್ರಕರಣದಲ್ಲಿ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರೂ ಅವರಿಗೆ ಶಿಕ್ಷೆ ಆಗಲೇಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ನಿವೃತ್ತ ಹಿರಿಯ ಪೊಲೀಸ್ ಅಧಿಕಾರಿ ಎಸ್.ಪಿ.ಸಾಂಗ್ಲಿಯಾನ ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಧಿಖಾನೆ ಡಿಜಿಪಿ ಆಗಿದ್ದ ವೇಳೆ ಜೈಲಿನಲ್ಲಿ ನಡೆಯುತ್ತಿರುವ ಅಕ್ರಮ ವ್ಯವಹಾರಗಳಿಗೆ ಆಸ್ಪದ ನೀಡುತ್ತಿರಲಿಲ್ಲ.ಇದೀಗ ಹಿರಿಯ ಅಧಿಕಾರಿಗಳ ಕುಮ್ಮಕ್ಕಿನಿಂದ ಜೈಲಿನಲ್ಲಿ ಗಾಂಜಾ ಸೇರಿದಂತೆ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ. ಇಂತಹ ಪ್ರಕರಣಗಳಲ್ಲಿ ಯಾರೇ ಭಾಗಿಯಾಗಿದ್ದರೂ ಅವರಿಗೆ ಶಿಕ್ಷೆಯಾಗಲೇಬೇಕು ಎಂದು ಹೇಳಿದರು.

ಬಂಧಿಖಾನೆಗಳಲ್ಲಿ ಈ ರೀತಿ ಅಕ್ರಮ ಚಟುವಟಿಕೆಗಳು ಕಂಡುಬರುವುದು ಒಳ್ಳೆಯ ಬೆಳವಣಿಗೆಯಲ್ಲ. ಪ್ರಕರಣ ಸಂಬಂಧ ಈಗಾಗಲೇ ತನಿಖೆ ನಡೆಯುತ್ತಿದೆ. ತನಿಖೆ ವರದಿ ಬಂದ ಮೇಲೆ ರಾಜ್ಯ ಸರ್ಕಾರ ಸೂಕ್ತ ಕ್ರಮಕೈಗೊಳ್ಳಲಿದೆ ಎಂದರು. ಕೇಂದ್ರದಲ್ಲಿ ಯುಪಿಎ ಸರ್ಕಾರ ಎರಡು ಬಾರಿ ಅಧಿಕಾರಕ್ಕೆ ಬಂದಂತೆ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ವಾಂಗೀಣ ಅಭಿವೃದ್ದಿ ಯೋಜನೆಗಳು ಕಾರಣವಾಗಿವೆ ಎಂದರು.

ಆರ್‍ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ಬಂಧಿಸಿದರೆ ಇಡೀ ರಾಜ್ಯವೇ ಹೊತ್ತಿ ಉರಿಯುತ್ತದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಹೇಳಿಕೆಗೆ ಟೀಕಿಸಿದ ಅವರು, ಇಂತಹ ಹೇಳಿಕೆಯಿಂದ ಇಡೀ ಸಮಾಜದ ಸ್ವಾಸ್ಥ್ಯವೇ ಹಾಳಾಗುತ್ತದೆ. ಯಾರೂ ಇಂತಹ ಹೇಳಿಕೆ ನೀಡಬಾರದು ಎಂದು ತಿಳಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin