ಬಿಹಾರ ಬಿಕ್ಕಟ್ಟು : ಇಂದು ಲಾಲೂ-ನಿತೀಶ್ ಮಹತ್ವದ ಸಭೆ

Lalu--01

ಪಾಟ್ನ, ಜು.26- ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಲಾಲೂ ಪ್ರಸಾದ್ ಯಾದವ್ ಪುತ್ರ ತೇಜಸ್ವಿ ಯಾದವ್ ಸಿಕ್ಕಿಹಾಕಿಕೊಂಡಿರುವ ಹಿನ್ನೆಲೆಯಲ್ಲಿ ಉಂಟಾಗಿರುವ ಆರ್‍ಜೆಡಿ ಮತ್ತು ಜೆಡಿಯು ಬಿಕ್ಕಟ್ಟು ತಾರಕಕ್ಕೇರಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್ ಸಂಪುಟದಲ್ಲಿ ಉಪ ಮುಖ್ಯಮಂತ್ರಿಯಾಗಿರುವ ತೇಜಸ್ವಿ ಯಾದವ್ ಭವಿಷ್ಯ ಇಂದು ನಿರ್ಧಾರವಾಗಲಿದೆ.  ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಸಿಲುಕಿರುವ ತೇಜಸ್ವಿ ಯಾದವ್ ಅವರನ್ನು ಸಂಪುಟದಿಂದ ಕೈಬಿಡಬೇಕೆಂಬ ವಿರೋಧ ಪಕ್ಷಗಳ ಒತ್ತಡದ ಹಿನ್ನೆಲೆಯಲ್ಲಿ ತೇಜಸ್ವಿಯವರನ್ನು ತೆಗೆದು ಹಾಕಲು ಈಗಾಗಲೇ ನಿರ್ಧರಿಸಲಾಗಿದೆ. ಆದರೆ ಮೈತ್ರಿ ಕೂಟಕ್ಕೆ ಧಕ್ಕೆ ಉಂಟಾಗಲಿದೆ ಎಂಬ ಕಾರಣಕ್ಕಾಗಿ ನಿತೀಶ್ ಇನ್ನೂ ಕೂಡ ಮೀನಾಮೇಷ ಎಣಿಸುತ್ತಿದ್ದಾರೆ.

ಈ ಎಲ್ಲ ಬೆಳವಣಿಗೆಗಳ ನಂತರ ಇಂದು ಸಂಜೆ ಆರ್‍ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರು ಮುಖ್ಯಮಂತ್ರಿ ನಿತೀಶ್ ಕುಮಾರ್ ಜತೆ ಮಹತ್ವದ ಮಾತುಕತೆ ನಡೆಸಲಿದ್ದು, ಕಳೆದ ಕೆಲವು ದಿನಗಳಿಂದ ಬಿಹಾರ ರಾಜಕೀಯದಲ್ಲಿ ಉಂಟಾಗಿರುವ ಬಿಕ್ಕಟ್ಟಿಗೆ ಇಂದು ಯಾವುದಾದರೊಂದು ಪರಿಹಾರ ದೊರೆಯುವ ಸಾಧ್ಯತೆ ಇದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin