ಬೆಳ್ಳಂದೂರಿನ ಅಪಾರ್ಟ್‍ಮೆಂಟ್‍ನಲ್ಲಿ ಸೆಕ್ಯುರಿಟಿ ಗಾರ್ಡ್ ಕೊಲೆ

Murder-Blood

ಬೆಂಗಳೂರು, ಜು.26- ಕರ್ತವ್ಯನಿರತರಾಗಿದ್ದ ಅಪಾರ್ಟ್‍ಮೆಂಟ್‍ವೊಂದರ ಸೆಕ್ಯುರಿಟಿ ಗಾರ್ಡ್‍ನನ್ನು ಚಾಕುವಿನಿಂದ ಇರಿದು ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ಬೆಳ್ಳಂದೂರು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅಸ್ಸೋಂ ಮೂಲದ ಹರ್ಷದ್ ಅಹಮ್ಮದ್ (27) ಕೊಲೆಯಾದ ಸೆಕ್ಯೂರಿಟಿ ಗಾರ್ಡ್.ಹರಳೂರಿನ ಲೇಕ್‍ಡಿಯು ಅಪಾರ್ಟ್‍ಮೆಂಟ್‍ನಲ್ಲಿ ಈತ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ರಾತ್ರಿ 10.30ರಲ್ಲಿ ಎಂದಿನಂತೆ ಕೆಲಸದಲ್ಲಿ ನಿರತರಾಗಿದ್ದಾಗ ದುಷ್ಕರ್ಮಿಗಳು ಏಕಾಏಕಿ ನುಗ್ಗಿ ಚಾಕುವಿನಿಂದ ಸೆಕ್ಯೂರಿಟಿ ಗಾರ್ಡ್ ಹೊಟ್ಟೆಗೆ ಇರಿದು ಪರಾರಿಯಾಗಿದ್ದಾರೆ.

ತೀವ್ರ ರಕ್ತಸ್ರಾವದಿಂದ ಸೆಕ್ಯೂರಿಟಿ ಗಾರ್ಡ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸುದ್ದಿ ತಿಳಿದ ಬೆಳ್ಳಂದೂರು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಶವವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದಾರೆ. ಯಾರು, ಯಾವ ಕಾರಣಕ್ಕೆ ಸೆಕ್ಯೂರಿಟಿ ಗಾರ್ಡ್‍ನನ್ನು ಕೊಲೆ ಮಾಡಿದ್ದಾರೆಂಬುದು ತಿಳಿದುಬಂದಿಲ್ಲ.  ಬೆಳ್ಳಂದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin