ಮಗುವಿನೊಂದಿಗೆ ಬಾವಿಗೆ ಹಾರಿ ಗ್ರಾಪಂ ಕಾರ್ಯದರ್ಶಿ ಆತ್ಮಹತ್ಯೆ

Suicide-Water-02

ವಿಜಯಪುರ, ಜು.26- ಗ್ರಾಮ ಪಂಚಾಯಿತಿ ಮಹಿಳಾ ಕಾರ್ಯದರ್ಶಿಯೊಬ್ಬರು ಒಂದೂವರೆ ವರ್ಷದ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಂಧಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಂದ್ರಕಲಾ ತಿಪ್ಪಣ್ಣ ಡೋಣೂರ (46) ಎಂಬುವರೇ ತಮ್ಮ ಒಂದೂವರೆ ವರ್ಷದ ಗೌತಮ್ ಎಂಬ ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಬಂದಾಳ ಗ್ರಾಮ ಪಂಚಾಯಿತಿ ಕಾರ್ಯದರ್ಶಿ. ಇತ್ತೀಚೆಗಷ್ಟೆ ವರ್ಗಾವಣೆಗೊಂಡಿದ್ದ ಇವರ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಸಿಂಧಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin