ಹಣಕಾಸು ವಿಚಾರವಾಗಿ ನಡೆದ ಜಗಳದಲ್ಲಿ ಹಾರಿತು ಗುಂಡು

firing

ಕೊಳ್ಳೇಗಾಲ, ಜು.26-ಹಣಕಾಸು ವಿಚಾರವಾಗಿ ಗ್ರಾಮದಲ್ಲಿ ನಡೆದ ಜಗಳದ ವೇಳೆ ವ್ಯಕ್ತಿ ಮೇಲೆ ಗುಂಡು ಹಾರಿಸಿರುವ ಘಟನೆ ಹನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯಲ್ಲಿ ಕೃಷ್ಣ (40) ಎಂಬುವರ ಕೈ ಮತ್ತು ಕಾಲಿಗೆ ಗಾಯವಾಗಿದ್ದು, ಇವರನ್ನು ಮೈಸೂರಿನ ಕೆಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೊರಟ್ಟಿ ಹೊಸೂರಿನ ನಿವಾಸಿ ಸಿದ್ದರಾಜು ಗ್ರಾಮದ ಕೃಷ್ಣ ಎಂಬುವರಿಗೆ ಹಣ ನೀಡಿದ್ದರು ಎನ್ನಲಾಗಿದೆ.

ಇದೇ ವಿಚಾರವಾಗಿ ಆಗಿಂದಾಗ್ಗೆ ಇವರಿಬ್ಬರ ಮಧ್ಯೆ ಗಲಾಟೆ ನಡೆಯುತ್ತಲೇ ಇತ್ತು. ನಿನ್ನೆ ರಾತ್ರಿ ಮತ್ತೆ ಇವರಿಬ್ಬರ ಮಧ್ಯೆ ಜಗಳ ನಡೆದಾಗ ಸಿದ್ದರಾಜು ಮನೆಯಲ್ಲಿದ್ದ ನಾಡಬಂದೂಕನ್ನು ತಂದು ಕೃಷ್ಣನ ಮೇಲೆ ಗುಂಡು ಹಾರಿಸಿದ್ದಾನೆ. ಪರಿಣಾಮವಾಗಿ ಕೃಷ್ಣ ಅವರ ಕೈ ಮತ್ತು ಕಾಲಿಗೆ ಗಾಯವಾಗಿದ್ದು, ತಕ್ಷಣ ಇವರಿಗೆ ಕೊಳ್ಳೇಗಾಲ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆಆರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಹನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin