ಅಧಿಕಾರಕ್ಕಾಗಿ ಜನ ಏನು ಬೇಕಾದರೂ ಮಾಡುತ್ತಾರೆ : ನಿತೀಶ್ ವಿರುದ್ಧ ರಾಗಾ ವಾಗ್ದಾಳಿ

Rahul--01

ನವದೆಹಲಿ, ಜು.27-ಸ್ವಾರ್ಥ ಮತ್ತು ಅಧಿಕಾರ ಲಾಲಸೆಗಾಗಿ ಜನರು ಏನು ಬೇಕಾದರೂ ಮಾಡುತ್ತಾರೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಬಿಹಾರದ ನೂತನ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಹಾರದಲ್ಲಿ ಆರ್‍ಜೆಡಿ-ಕಾಂಗ್ರೆಸ್ ಜೊತೆಗಿನ ಮಹಾಮೈತ್ರಿಯಿಂದ ಹೊರಬಂದು, ಬಿಜೆಪಿ ಜೊತೆ ಕೈಜೋಡಿಸಿರುವ ನಿತೀಶ್ ವಿರುದ್ಧ ರಾಹುಲ್ ಕಿಡಿ ಕಾರಿದ್ಧಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಾಲ್ಕು ತಿಂಗಳಿನಿಂದಲೇ ಈ ವಿಷಯದ ಬಗ್ಗೆ ನನಗೆ ತಿಳಿದಿತ್ತು. ಈ ಒಳಸಂಚಿನ ಬಗ್ಗೆ ಗೊತ್ತಿತ್ತು. ಸತ್ತ ಕೇ ಲಿಯೇ ಕುಚ್ ಭಿ ಕರ್ ದೇತಾ ಹೇ (ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ) ಎಂದು ಖಂಡಿಸಿದರು

ಬಿಹಾರದ ಜನತೆ ಕೋಮುವಾದಿಗಳ ವಿರುದ್ಧವಾಗಿ ನಿತೀಶ್ ಕುಮಾರ್‍ಗೆ ಬೆಂಬಲ ನೀಡಿದ್ದರು. ಆದರೆ ಅವರು ರಾಜಕೀಯ ಲಾಭಕ್ಕಾಗಿ ರಾಜ್ಯದ ಜನರ ವಿಶ್ವಾಸಕ್ಕೆ ದ್ರೋಹ ಬಗೆದಿದ್ದಾರೆ. ಆ ಮೂಲಕ ರಾಜಕೀಯ ವ್ಯವಸ್ಥೆಯನ್ನೇ ಕುಲಗೆಡಿಸಿ ಕೋಮುವಾದಿಗಳಾದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಷಾ ಜೊತೆ ಕೈಜೋಡಿಸಿದ್ಧಾರೆ ಎಂದು ಕಟುವಾಗಿ ಟೀಕಿಸಿದರು.

ನಿತೀಶ್ ಪ್ರತ್ಯುತ್ತರ :

ಬಿಹಾರ ಜನರ ಹಿತಾಸಕ್ತಿಗಾಗಿಯೇ ತಾವು ಆರ್‍ಜೆಡಿಯಿಂದ ದೂರ ಸರಿದು ಬಿಜೆಪಿ ಜೊತೆ ಕೈಜೋಡಿಸಿರುವುದಾಗಿ ನಿತೀಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನರ ಹಿತರಕ್ಷಣೆಯೊಂದಿಗೆ ಅಭಿವೃದ್ದಿಗಾಗಿ ಶ್ರಮಿಸುವುದಾಗಿ ಹೇಳಿದ್ದಾರೆ.

ಪ್ರಧಾನಿ ಅಭಿನಂದನೆ :

ನೂತನ ಮುಖ್ಯಮಂತ್ರಿಯಾಗಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಿತೀಶ್ ಕುಮಾರ್ ಮತ್ತು ಸುಶೀಲ್ ಮೋದಿ ಅವರನ್ನು ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿ, ಸಮೃದ್ಧ ಬಿಹಾರ ನಿರ್ಮಾಣಕ್ಕಾಗಿ ಒಗ್ಗೂಡಿ ಶ್ರಮಿಸುವಂತೆ ಶುಭ ಕೋರಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin