ಅಪಘಾತಯ ತಡೆಯಲು ಹೋಗಿ ಕೆಎಸ್‍ಆರ್‍ಟಿಸಿ ಬಸ್ ಪಲ್ಟಿ, ಓರ್ವ ಸಾವು

ತುಮಕೂರು, ಜು.27- ಎದುರಿಗೆ ಬಂದ ಲಾರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ಕೆಎಸ್‍ಆರ್‍ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ ಒಬ್ಬರು ಸಾವನ್ನಪ್ಪಿ , 20 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು- ಹೊನ್ನಾವರ ರಾಷ್ಟ್ರೀಯ ಹೆದ್ದಾರಿ ಮಲ್ಲಸಂದ್ರ ಬಳಿ ಇಂದು ಬೆಳಗ್ಗೆ ಸಂಭವಿಸಿದೆ. ಚಿಕ್ಕನಾಯಕನಹಳ್ಳಿಯ ಶಶಾಂಕ್ ಮೃತಪಟ್ಟ ವ್ಯಕ್ತಿ. ಶಿವಮೊಗ್ಗ ಡಿಪೋಗೆ ಸೇರಿದ ಸಾರಿಗೆ ಬಸ್ ಹೊಸದುರ್ಗದಿಂದ ತುಮಕೂರಿಗೆ ಬರುತ್ತಿತ್ತು.

ಮಲ್ಲಸಂದ್ರದ ಬಳಿ ಮುಂದೆ ಚಲಿಸುತ್ತಿದ್ದ ಬಸ್ಸೊಂದನ್ನು ಓವರ್ ಟೇಕ್ ಮಾಡಲು ಹೋದಾಗ ಎದುರಿಗೆ ಲಾರಿಯೊಂದು ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಬಿದ್ದಿದೆ. ಉರುಳಿ ಬಿದ್ದ ರಭಸಕ್ಕೆ ಸುಮಾರು 20 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಸ್ಥಳೀಯರ ನೆರವಿನೊಂದಿಗೆ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ವೃತ್ತ ನಿರೀಕ್ಷಕ ತಿಮ್ಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿ ಗ್ರಾಮಾಂತರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin