ಧರ್ಮಸಿಂಗ್ ಅಗಲಿಕೆಗೆ ಮೋದಿ ಸೇರಿದಂತೆ ಗಣ್ಯರ ಸಂತಾಪ, 3 ದಿನ ಶೋಕಾಚರಣೆ

Dharm-Singh--0021

ಬೆಂಗಳೂರು, ಜು.27- ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ಮುತ್ಸದ್ದಿ ಎನ್.ಧರ್ಮಸಿಂಗ್ ಅವರ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರಮೋದಿ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಧರ್ಮಸಿಂಗ್ ಅವರ ನಿಧನ ತುಂಬಲಾರದ ನಷ್ಟವಾಗಿದ್ದು, ದೇವರು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.  ಅತ್ಯಂತ ಉನ್ನತ ಹುದ್ದೆಗಳನ್ನು ಅಲಂಕರಿಸಿ ರಾಜ್ಯದ ಅಭಿವೃದ್ಧಿಯಲ್ಲಿ ಧರ್ಮಸಿಂಗ್ ಅವರ ಪಾತ್ರವನ್ನು ಮರೆಯುವಂತಿಲ್ಲ. ಅವರ ನಿಧನ ನಿಜಕ್ಕೂ ರಾಜ್ಯಕ್ಕೆ ಭರಿಸಲಾರದ ನಷ್ಟ ಎಂದು ರಾಜ್ಯಪಾಲ ವಿ.ಆರ್.ವಾಲಾ ಅವರು ಕಂಬನಿ ಮಿಡಿದಿದ್ದಾರೆ.  [ ಮಾಜಿ ಮುಖ್ಯಮಂತ್ರಿ ಎನ್. ಧರಂಸಿಂಗ್ ಇನ್ನಿಲ್ಲ ]

ಇದೇ ರೀತಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ, ಅನಂತ್‍ಕುಮಾರ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ, ಉಪಾಧ್ಯಕ್ಷ ರಾಹುಲ್‍ಗಾಂಧಿ, ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಸಚಿವರಾದ ಡಿ.ಕೆ.ಶಿವಕುಮಾರ್, ರಾಮಲಿಂಗಾರೆಡ್ಡಿ, ಉಮಾಶ್ರೀ, ವಿಧಾನಮಂಡಲದ ಉಭಯ ಸದನಗಳ ಪ್ರತಿಪಕ್ಷದ ನಾಯಕರಾದ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ , ಮುರುಘಾ ಮಠದ ಡಾ.ಮುರುಘಾ ಶರಣರು, ಸಂಸದ ಜಿ.ಎಂ.ಸಿದ್ದೇಶ್, ಮಾಜಿ ಸಚಿವ ಬಚ್ಚೇಗೌಡ ಸೇರಿದಂತೆ ಹಾಲಿ ಶಾಸಕರು, ಸಚಿವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. [ ಅಜಾತಶತ್ರುವಾಗಿ ಧರ್ಮಸಿಂಗ್ ಸಿಂಗ್ ನಡೆದು ಬಂದ ದಾರಿ ]

ಮೂರು ದಿನಗಳ ಶೋಕಾಚರಣೆ :

ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಅವರ ಗೌರವಾರ್ಥ ಸರ್ಕಾರ ಮೂರು ದಿನಗಳ ಶೋಕಾಚರಣೆ ಘೋಷಿಸಿದೆ. ಈ ಸಂದರ್ಭದಲ್ಲಿ ಯಾವುದೇ ಸರ್ಕಾರಿ ಕಾರ್ಯಕ್ರಮಗಳು ಇರುವುದಿಲ್ಲ. ಬಹುತೇಕ ಎಲ್ಲ ಸಾಂಸ್ಕøತಿಕ ಕಾರ್ಯಕ್ರಮಗಳು ರದ್ದಾಗಲಿವೆ. ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ನಡೆಯಲಿದ್ದು, ಮೃತರ ಗೌರವಾರ್ಥ ರಾಷ್ಟ್ರಧ್ವಜವನ್ನು ಅರ್ಧಕ್ಕೇ ಇಳಿಸಲಾಗಿದೆ. [ ಆಪ್ತಮಿತ್ರನ ಅಗ್ಗಳಿಕೆ ತಾಳಲಾಗದೆ ಬಿಕ್ಕಿಬಿಕ್ಕಿ ಅತ್ತ ಖರ್ಗೆ ]

ಧರಂ ಅಗಲಿಕೆ ತುಂಬಾ ನೋವು ತಂದಿದೆ : 

ವಿಜಯಪುರ, ಜು.27- ಮಾಜಿ ಮುಖ್ಯಮಂತ್ರಿ ಧರಂಸಿಂಗ್ ನಿಧನದಿಂದ ನನಗೆ ತುಂಬ ನೋವಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮಸಿಂಗ್ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ನುಡಿದರು.  ನಾವು ಮತ್ತು ಅವರು ಜತೆಯಾಗಿ ಕೆಲಸ ಮಾಡಿದ್ದೇವೆ. ಅವರು ಒಳ್ಳೆಯ ಮುತ್ಸದ್ಧಿತನದಿಂದ ಕಾರ್ಯನಿರ್ವಹಿಸಿದ್ದರು. ಈ ಘಟನೆಯಿಂದ ನನಗೆ ತೀವ್ರ ನೋವಾಗಿದೆ ಎಂದು ಅವರು ಹೇಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin