ಮೈಸೂರಲ್ಲಿ ಸಿಗರೇಟ್ ಸೇದುವವರಿಗೆ ಕಾದಿದೆ ‘ಕೋಟಾ’ ಶಾಕ್..!

ಈ ಸುದ್ದಿಯನ್ನು ಶೇರ್ ಮಾಡಿ

Smoking--01

ಮೈಸೂರು, ಜು.27-ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ಮಾಡುವವರ ವಿರುದ್ಧ ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ (‘ಕೋಟಾ’) ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ರಂದೀಪ್ ಅವರು ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು ಕೊಟ್ಪಾ ಕಾಯ್ದೆಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಹೆಚ್ಚನ ಅರಿವು ಮೂಡಿಸಬೇಕು ಹಾಗೂ ಪ್ರತಿದಿನ 100 ಪ್ರಕರಣ ದಾಖಲಿಸುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಹಾಗೆಯೇ ಅನಿರೀಕ್ಷಿತ ದಾಳಿ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ತಂಬಾಕು ನಿಷೇಧಕೋಶ ಮತ್ತು ನಗರಪಾಲಿಕೆ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಸ್ಥಳೀಯ ಆಡಳಿತ ಸಮನ್ವಯತೆಯಲ್ಲಿ ಕಾರ್ಯ ನಿರ್ವಹಿಸುವಂತೆ ತಾಕೀತು ಮಾಡಿದರು.
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಅಳವಡಿಸಬೇಕು. ತಂಬಾಕು ಜಾಹೀರಾತು ವಿರುದ್ಧ ಕ್ರಮ ಕೈಗೊಳ್ಳುವಂತೆ ಹೇಳಿದರು. ಬೆಂಗಳೂರಿನ ಇನ್ಸಿಟ್ಯೂಟ್ ಆಫ್ ಪಬ್ಲಿಕ್ ಹೆಲ್ತ್ ಪ್ರತಿನಿಧಿ ಡಾ.ಚಂದ್ರಶೇಖರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಪಶುಪತಿ, ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ. ಚಿತಂಬರ್ ಮತ್ತಿತರರು ಉಪಸ್ಥಿತರಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin