ಲೋಕಸಭೆಯಲ್ಲಿ ಕೋಲಾಹಲ, ಕಲಾಪಕ್ಕೆ ಅಡ್ಡಿ

ಈ ಸುದ್ದಿಯನ್ನು ಶೇರ್ ಮಾಡಿ

Loksabha-002

ನವದೆಹಲಿ, ಜು.27-ಬಿಹಾರ ರಾಜಕೀಯ ಬೆಳವಣಿಗೆ ಮತ್ತು ಕೆಲವು ಗಂಭೀರ ವಿಷಯಗಳು ಇಂದು ಲೋಕಸಭೆಯಲ್ಲಿ ಭಾರೀ ಗದ್ದಲ ಮತ್ತು ಕೋಲಾಹಲಕ್ಕೆ ಕಾರಣವಾಯಿತು. ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ತೀವ್ರ ವಾಗ್ದಾಳಿ ನಡೆಸಿದ ಪರಿಣಾಮ ಸುಗಮ ಕಲಾಪಕ್ಕೆ ಅಡ್ಡಿಯಾಗಿ ಸದನವನ್ನು ಮುಂದೂಡಲಾಯಿತು. ಪ್ರಶ್ನೋತ್ತರ ಕಲಾಪ ಆರಂಭವಾಗುತ್ತಿದ್ದಂತೆ, ಆರ್‍ಜೆಡಿ ಸದಸ್ಯ ಜೈ ಪ್ರಕಾಶ್ ನಾರಾಯಣ್ ಯಾದವ್, ಮಹಾಮೈತ್ರಿ ತೊರೆದು ಸರ್ಕಾರ ರಚನೆಗೆ ಬಿಜೆಪಿ ಜೊತೆ ಕೈಜೋಡಿಸಿದ ಜೆಡಿಯು ಮುಖಂಡ ನಿತೀಶ್ ಕುಮಾರ್ ವಿರುದ್ಧ ಘೋಷಣೆ ಕೂಗಿದರು. ಇದು ಪ್ರಜÁಪ್ರಭುತ್ವದ ಕಗ್ಗೊಲೆ ಎಂದು ಏರಿದ ಧ್ವನಿಯಲ್ಲಿ ಪ್ರತಿಭಟಿಸಿದರು.

ಇದೇ ವೇಳೆ ಕಾಂಗ್ರೆಸ್ ಸದಸ್ಯರೆಲ್ಲರೂ ಗುಂಪುಗೂಡಿ, ತಮ್ಮ ಪಕ್ಷದ ಆರು ಸದಸ್ಯರ ಅಮಾನತು ಆದೇಶವನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಸಭಾಧ್ಯಕ್ಷರ ಪೀಠದ ಮುಂದಿನ ಸ್ಥಳಕ್ಕೆ ಧಾವಿಸಿ ಪ್ರತಿಭಟನೆ ನಡೆಸಿದರು. ಅಲ್ಲದೇ ಗೋರಕ್ಷಕರ ಹಿಂಸಾಚಾರ ಪ್ರಕರಣಗಳ ಬಗ್ಗೆಯೂ ಚರ್ಚೆಗೆ ಅವಕಾಶ ನೀಡಬೇಕೆಂದು ಆಗ್ರಹಿಸಿದರು.  ವಿರೋಧಪಕ್ಷಗಳ ಸದಸ್ಯರಿಂದ ಕಲಾಪಕ್ಕೆ ಅಡ್ಡಿಯಾಗಿ ಕೋಲಾಹಲ ಉಂಟಾದ ಕಾರಣ ಸ್ಪೀಕರ್ ಸುಮಿತ್ರಾ ಮಹಾಜನ್ ಸದನವನ್ನು ಕೆಲಕಾಲ ಮುಂದೂಡಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin