ಸಾಂಸ್ಕೃತಿಕ ನಗರಿಯ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಲು ಜಿಲ್ಲಾಡಳಿತ ಪ್ಲಾನ್

ಈ ಸುದ್ದಿಯನ್ನು ಶೇರ್ ಮಾಡಿ

Mysuru--01

ಮೈಸೂರು, ಜು.27- ಪ್ಲಾಸ್ಟಿಕ್ ಮುಕ್ತ ಮಾಡಿದ ಬೆನ್ನಲ್ಲೇ ಜಿಲ್ಲೆಯ ಸೌಂದರ್ಯವನ್ನು ಮತ್ತಷ್ಟು ಕಂಗೊಳಿಸುವ ಹಸಿರುಮಯವನ್ನಾಗಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಜಿಲ್ಲಾಡಳಿತ ಕಚೇರಿಯಲ್ಲಿ ಜಿಲ್ಲಾಧಿಕಾರಿ ರಂದೀಪ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಹಲವು ತೀರ್ಮಾನಗಳನ್ನು ಕೈಗೊಳ್ಳಲಾಯಿತು. ಸಾಂಸ್ಕೃತಿಕ ನಗರಿ ಮೈಸೂರು ಈಗಾಗಲೇ ಕಸ, ಪ್ಲಾಸ್ಟಿಕ್ ಮುಕ್ತವನ್ನಾಗಿಸಿದ್ದು , ಜಿಲ್ಲೆಯ ಸೌಂದರ್ಯವನ್ನು ಮತ್ತಷ್ಟು ಇಮ್ಮಡಿಗೊಳಿಸುವ ನಿಟ್ಟಿನಲ್ಲಿ ನಗರದ ರಸ್ತೆ ಬದಿಗಳಲ್ಲಿ ವಿವಿಧ ಗಿಡಗಳನ್ನು ನೆಡಲಾಗುವುದು.

ನಗರ ಮತ್ತು ಹೆದ್ದಾರಿಗಳಲ್ಲಿ ಶಾಶ್ವತವಾಗಿ ಹಚ್ಚ ಹಸಿರಾಗಿಸುವ ಯೋಜನೆಯನ್ನು ಜಿಲ್ಲಾಡಳಿತ ಹಮ್ಮಿಕೊಂಡಿದೆ ಎಂದು ತಿಳಿಸಿದರು. ಈ ಯೋಜನೆಗೆ ಸರ್ಕಾರ ಸಂಘ -ಸಂಸ್ಥೆಗಳು, ಸರ್ಕಾರೇತರ ಸಂಸ್ಥೆಗಳು , ಸಾರ್ವಜನಿಕರು ಕೈ ಜೋಡಿಸಬೇಕು. ನಗರದಲ್ಲಿರುವ ನೂರು ಉದ್ಯಾನವನ, ಶಾಲೆಗಳನ್ನು ಗುರುತಿಸಿ ಅಲ್ಲಿ ಗಿಡ ನೆಟ್ಟು ಪೋಷಿಸುವ ಜವಾಬ್ದಾರಿ ಅಲ್ಲಿನ ಸಿಬ್ಬಂದಿಗಳಿಗೆ ವಹಿಸಲಾಗುವುದು ಎಂದರು. ಪಾಲಿಕೆ ಆಯುಕ್ತ ಜಗದೀಶ್ ಮಾತನಾಡಿ, ನಗರದಲ್ಲಿ ಈಗಾಗಲೇ 40 ಉದ್ಯಾನವನಗಳನ್ನು ಗುರುತಿಸಲಾಗಿದೆ. ನೂರು ಪಾರ್ಕ್‍ಗಳಲ್ಲಿ 75 ಪಾರ್ಕ್‍ಗಳನ್ನು ಅಭಿವೃದ್ಧಿಗೊಳಿಸಲು ಖಾಸಗಿ ಸಂಸ್ಥೆಗೆ ಟೆಂಡರ್ ನೀಡಲಾಗಿದೆ. ಉಳಿದ 25 ಪಾರ್ಕ್‍ಗಳ ಅಭಿವೃದ್ಧಿಗೆ ಯೋಜನೆ ಸಿದ್ಧಗೊಳಿಸಲಾಗಿದೆ ಎಂದರು.

ಮೈಸೂರಿನಲ್ಲಿ ಓಪನ್ ಜೀಪ್ ಟೂರಿಸಂ

ಮೈಸೂರು,ಜು.27- ಜಿಲ್ಲಾ ಪ್ರವಾಸೊದ್ಯ ಮವನ್ನು ಅಭಿವೃದ್ಧಿಪಡಿಸುವ ಸಲುವಾಗಿ ಓಪನ್ ಜೀಪ್ ಟೂರಿಸಂ,ಕಡಿಮೆ ವೆಚ್ಚದ ದಸರಾ ಸ್ಮರಣಿಕೆ ಮಾರಾಟ ಕೇಂದ್ರಗಳ ಸ್ಥಾಪನೆ ಬಗ್ಗೆ ಜಿಲ್ಲಾ ಪ್ರವಾಸೊದ್ಯಮ ಅಭಿವೃದ್ಧಿ ಸಮಿತಿಯಲ್ಲಿ ಚರ್ಚಿಸಲಾಯಿತು.  ಜಿಲ್ಲಾಧಿಕಾರಿ ರಂದೀಪ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ಓಪನ್ ಜೀಪ್ ಟೂರಿಸಂ ಹಾಗೂ ದಸರಾ ಸ್ಮರಣಿಕೆಗಳ ಮಾರಾಟ ಕೇಂದ್ರ ತೆರೆಯುವುದರಿಂದ ಮತ್ತಷ್ಟು ವಿದೇಶಿ ಪ್ರವಾಸಿಗರನ್ನು ಆಕರ್ಷಿಸಬಹುದು ಎಂದು ಪ್ರಸ್ತಾಪಿಸಲಾಯಿತು.

ಓಪನ್ ಜೀಪ್ ಟೂರಿಸಂ ಮೂಲಕ ದೇಶಿ- ವಿದೇಶಿಗಳಿಂದ ಬರುವ ಪ್ರವಾಸಿಗರಿಗೆ ಇಲ್ಲಿನ ಐತಿಹಾಸಿಕ ಕಟ್ಟಡಗಳ ಬಗ್ಗೆ ಮಾಹಿತಿ ನೀಡುವುದರ ಬಗ್ಗೆ ಚಿಂತಿಸಲಾಯಿತು. ಮೈಸೂರಿನಲ್ಲಿರುವ ಐತಿಹಾಸಿಕ ಕಟ್ಟಡಗಳು,ಮೃಗಾಲಯ ಸೇರಿದಂತೆ ನಗರದಲ್ಲಿರುವ ವಿವಿಧ ಸ್ಥಳಗಳಿಗೆ ಓಪನ್ ಜೀಪ್ ಮೂಲಕ ಕರೆದೊಯ್ಯುವುದು ಹಾಗೂ ಐತಿಹಾಸಿಕ ಸ್ಥಳಗಳ ಸ್ಮರಣಿಕೆಗಳನ್ನು ಸಣ್ಣ ಪ್ರಮಾಣದ ಲೋಹ ರೂಪದಲ್ಲಿ ಸಿದ್ದಪಡಿಸಿ ಅವುಗಳನ್ನು ದಸರಾ ಸ್ಮರಣಿಕಾ ಕೇಂದ್ರಗಳಲ್ಲಿ ಮಾರಾಟ ಮಾಡುವ ಕುರಿತು, ಹಾಗೆಯೇ ಸೆಪ್ಟಂಬರ್ ತಿಂಗಳಲ್ಲಿ ಓಪನ್ ಸ್ಟ್ರೀಟ್ ಪೆಸ್ಟಿವಲ್ ಆಯೋಜನೆ ಬಗ್ಗೆ ಕೂಡ ಸುದೀರ್ಘ ಚರ್ಚೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಪಾಲಿಕೆ ಆಯುಕ್ತ ಜಗದೀಶ್,ಆಹಾರ ಇಲಾಖೆ ಹಿರಿಯ ಉಪ ನಿರ್ದೇಶಕ ರಾಮೇಶ್ವರಪ್ಪ ,ಪ್ರವಾಸೊದ್ಯಮ ಇಲಾಖೆಯ ಉಪ ನಿರ್ದೇಶಕ ಜನಾರ್ದನ್,ಸೇಫ್ ವೀಲ್ ಸಂಸ್ಥೆಯ ಮಾಲಿಕ ಪ್ರಸಾದ್ ಸೇರಿದಂತೆ ಮತ್ತಿತರರು ಇದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin