ಸಿಲಿಂಡರ್ ಸ್ಫೋಟಗೊಂಡು ಮನೆಯ ಗೋಡೆ ಛಿದ್ರ ಛಿದ್ರ

Tumakuru--01

ತುಮಕೂರು, ಜು.27- ಇದ್ದಕ್ಕಿದ್ದಂತೆ ಮನೆಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡು ಗೃಹೋಪಯೋಗಿ ವಸ್ತುಗಳೆಲ್ಲ ಸುಟ್ಟು ಕರಕಲಾಗಿ ಮನೆಯ ಗೋಡೆ ಛಿದ್ರ ಛದ್ರವಾಗಿರುವ ಘಟನೆ ಗುಬ್ಬಿ ತಾಲೂಕಿನ ಕಡಬ ಗ್ರಾಮದಲ್ಲಿ ನಡೆದಿದೆ. ಅಂಬರೀಶ್ ಎಂಬುವರ ಮನೆಯಲ್ಲಿ ನಿನ್ನೆ ಸಂಜೆ ಇದ್ದಕ್ಕಿದ್ದಂತೆ ಸಿಲಿಂಡರ್ ಸ್ಫೋಟಗೊಂಡಿದ್ದು, ಸ್ಫೋಟದ ರಭಸಕ್ಕೆ ಗೋಡೆಗಳು ಛಿದ್ರ ಛಿದ್ರವಾಗಿವೆ. ಅಕ್ಕಪಕ್ಕದ ಮನೆಗಳ ಗೋಡೆಗಳು ಸಹ ಬಿರುಕುಬಿಟ್ಟಿವೆ.  ಕುಟುಂಬ ಸದಸ್ಯರು ಕೆಲಸದ ನಿಮಿತ್ತ ಹೊರಗೆ ಹೋಗಿದ್ದರಿಂದ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ಸುಟ್ಟು ಕರಕಲಾಗಿವೆ. ಮನೆ ಮುಂದೆ ನಿಲ್ಲಿಸಿದ್ದ ಟ್ರ್ಯಾಕ್ಟರ್‍ಗೂ ಕೂಡ ಹಾನಿಯುಂಟಾಗಿದೆ. ಈ ಸಂಬಂಧ ಸಿಎಸ್ ಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin