ಇಂದಿರಾ ಕ್ಯಾಂಟೀನ್’ಗೂ ಮುನ್ನ ಶರವಣರ ‘ಅಪ್ಪಾಜಿ ಕ್ಯಾಂಟಿನ್’ ಓಪನ್

ಈ ಸುದ್ದಿಯನ್ನು ಶೇರ್ ಮಾಡಿ

Sharavana--Appaji-Canteen--

ಬೆಂಗಳೂರು, ಜು.28- ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ರಿಯಾಯಿತಿ ದರದಲ್ಲಿ ಊಟ-ತಿಂಡಿ ನೀಡುವ ಇಂದಿರಾ ಕ್ಯಾಂಟಿನ್ ಆರಂಭಿಸುವ ಮುನ್ನವೇ ಜೆಡಿಎಸ್‍ನ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ನಮ್ಮ ಅಪ್ಪಾಜಿ ಕ್ಯಾಂಟಿನ್ ಪ್ರಾರಂಭಿಸುತ್ತಿದ್ದಾರೆ. ತಟ್ಟೆ ಇಡ್ಲಿ, ವಡೆ, ಖಾರಾಬಾತ್, ಕೇಸರಿಬಾತ್ ಮತ್ತಿತರ ತಿಂಡಿಗಳನ್ನು 5ರೂ.ಗೆ, 3ರೂ.ಗೆ ಕಾಫಿ ಅಥವಾ ಟೀ ನೀಡಲು ಉದ್ದೇಶಿಸಲಾಗಿದೆ.

ಮುದ್ದೆ-ಸಾಂಬಾರು, ಅನ್ನ-ಸಾಂಬಾರು, ರೈಸ್‍ಬಾತ್ 10ರೂ.ಗೆ ನೀಡಲು ತೀರ್ಮಾನಿಸಲಾಗಿದೆ. ಬಸವನಗುಡಿ ವಿಧಾನಸಭಾ ಕ್ಷೇತ್ರದ ಹನುಮಂತನಗರದ 50 ಅಡಿ ರಸ್ತೆಯಲ್ಲಿ ಬಡವರ ಬಂಧು ದೇವೇಗೌಡ ನಮ್ಮ ಅಪ್ಪಾಜಿ ಕ್ಯಾಂಟಿನ್ ಆಗಸ್ಟ್ 2ರಂದು ಬೆಳಗ್ಗೆ 11 ಗಂಟೆಗೆ ಪ್ರಾರಂಭವಾಗಲಿದೆ.   ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪಟ್ಟನಾಯಕನಹಳ್ಳಿ ಮಠದ ಶ್ರೀ ನಂಜಾವಧೂತ ಸ್ವಾಮೀಜಿಯವರು ವಹಿಸಲಿದ್ದು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಚನ್ನಮ್ಮ ದೇವೇಗೌಡರು ಕ್ಯಾಂಟಿನ್ ಉದ್ಘಾಟಿಸಲಿದ್ದಾರೆ.

ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಎಚ್.ಡಿ.ರೇವಣ್ಣ ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin