ಎಎಸ್‍ಐ ಮನೆ ಮೇಲೆ ಎಸಿಬಿ ದಾಳಿ

ACB

ರಾಮನಗರ, ಜು.28-ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದ ಮೇಲೆ ಚನ್ನಪಟ್ಟಣದಲ್ಲಿರುವ ರೈಲ್ವೆ ಇಲಾಖೆ ಎಎಸ್‍ಐಯೊಬ್ಬರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೆಜೆಸ್ಟಿಕ್ ರೈಲ್ವೆ ನಿಲ್ದಾಣ ಪೊಲೀಸ್ ಠಾಣೆಯ ಎಎಸ್‍ಐ ಮಲ್ಲೇಶ್ ಅವರ ಮನೆ ಮೇಲೆ ದಾಳಿ ನಡೆಸಿದ್ದು, ಜಿಲ್ಲೆಯ ಚನ್ನಪಟ್ಟಣದಲ್ಲಿರುವ ಅವರ ಮನೆ ಎಸಿಬಿ ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ನಡೆಸಿ ಆಸ್ತಿಗೆ ಸಂಬಂಧಿಸಿದ ಹಲವು ಕಡತಗಳನ್ನು ಪರಿಶೀಲಿಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಮಾಡಿರುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎನ್ನಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin