ಪಂಚಭೂತಗಳಲ್ಲಿ ಲೀರವಾದ ಅಜಾತಶತ್ರು

Dharma-Sing--02

ಬೆಂಗಳೂರು, ಜು.28- 3 ಸುತ್ತು ಕುಶಾಲತಫು ಹಾರಿಸಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎನ್. ಧರಂ ಸಿಂಗ್ ಅವರ ಪಾರ್ಥೀವ ಶರೀರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆಲೋಗಿ ಗ್ರಾಮದ ಅವರ ಜಮೀನಿನಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ಹಿರಿಯ ಪುತ್ರ ವಿಜಯ್ ಸಿಂಗ್ ಅವರು ರಜಪೂತ ವಿಧಿವಿಧಾನವನ್ನು ನೆರವೇರಿಸಿದರು. ಬಳಿಕ ಗಂಧದ ಚಕ್ಕೆಯಿಂದ ಪಾರ್ಥಿವ ಶರೀರಕ್ಕೆ ಅಗ್ನಿ ಸ್ಪರ್ಶ ಮಾಡಿದರು. ಧರಂ ಸಿಂಗ್ ಅವರ ಅಂತ್ಯಕ್ರಿಯೆಯಲ್ಲಿ ಸಾವಿರಾರು ಜನರು ಪಾಲ್ಗೊಂಡು ಅಂತಿಮ ದರ್ಶನ ಪಡೆದರು.

ತಮ್ಮ ನೆಚ್ಚಿನ ನಾಯಕನ ಅಂತಿಮ ದರ್ಶನ ಪಡೆಯಲು ಜನಸಾಗರವೇ ಹರಿದುಬಂದಿತ್ತು. ನಿನ್ನೆ ನಿಧನರಾದ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರ ಹುಟ್ಟೂರಾದ ಜೇವರ್ಗಿ ತಾಲೂಕು ನೆಲೊಗಿಯಲ್ಲಿ ನೀರವ ಮೌನ ಆವರಿಸಿತ್ತು. ಅಂತಿಮ ದರ್ಶನ ಪಡೆಯಲು ಅಪಾರ ಅಭಿಮಾನಿಗಳು, ಬೆಂಬಲಿಗರು, ವಿವಿಧ ಪಕ್ಷಗಳ ಕಾರ್ಯಕರ್ತರು ಭಾರೀ ಸಂಖ್ಯೆಯಲ್ಲಿ ಆಗಮಿಸಿದ್ದು, ನೂಕುನುಗ್ಗಲು ಉಂಟಾಗಿತ್ತು. ಗಣ್ಯರಿಗೆ, ಅತಿಗಣ್ಯರಿಗೆ, ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆಯನ್ನು ಮಾಡಲಾಗಿತ್ತು. ಇಂದು ಬೆಳಗ್ಗೆ 12 ಗಂಟೆಯವರೆಗೆ ಎಂ.ವಿ.ಕಾಲೇಜು ಮೈದಾನದಲ್ಲಿ ಅಂತಿಮ ದರ್ಶನಕ್ಕ ಇಡಲಾಗಿದ್ದು, ಅಲ್ಲಿಗೆ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿ ಅಂತಿಮ ದರ್ಶನ ಪಡೆದರು.

ಎಂ.ವಿ.ಕಾಲೇಜು ಮೈದಾನದಿಂದ ಪಾರ್ಥಿವ ಶರೀರವನ್ನು ಧರ್ಮಸಿಂಗ್ ಅವರ ಹುಟ್ಟೂರಾದ ನೆಲೊಗಿಗೆ ಕೊಂಡೊಯ್ಯಲಾಯಿತು. ನೆಲೊಗಿ ಗ್ರಾಮಸ್ಥರು ಸ್ವಯಂಪ್ರೇರಿತರಾಗಿ ಅಂತಿಮ ಸಂಸ್ಕಾರ ನಡೆಯುವ ಜಾಗದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ನಮ್ಮ ಗ್ರಾಮದವರೊಬ್ಬ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿ ನಮಗೆಲ್ಲ ಒಳ್ಳೆಯದನ್ನು ಮಾಡಿದ್ದಾರೆ. ಅವರ ಸಾವಿನ ಸುದ್ದಿ ಕೇಳಿ ನಮಗೆ ಅತೀವ ದುಃಖವಾಗಿದೆ.

ಜೇವರ್ಗಿಯಲ್ಲಿ ಅಂತಿಮ ಸಂಸ್ಕಾರ ಮಾಡಲು ಮುಂದಾಗಿದ್ದರು. ಆದರೆ ನಮ್ಮ ನಾಯಕನ ಅಂತ್ಯಸಂಸ್ಕಾರ ನಮ್ಮ ಊರಲ್ಲೇ ನಡೆಯಬೇಕೆಂದು ಒತ್ತಾಯಿಸಿದ್ದರಿಂದ ಅಂತಿಮ ಸಂಸ್ಕಾರ ಇಲ್ಲೇ ಮಾಡಲಾಗುತ್ತಿದೆ ಎಂದು ಗ್ರಾಮದ ಮುಖಂಡರು ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ, ಸಚಿವರಾದ ಎಚ್.ಕೆ.ಪಾಟೀಲ್, ಶರಣಪ್ರಕಾಶ್ ಪಾಟೀಲ್, ಪ್ರಿಯಾಂಕ್‍ಖರ್ಗೆ ಸೇರಿದಂತೆ ಬಹುತೇಕ ಸಂಪುಟದ ಎಲ್ಲಾ ಸಚಿವರು, ಎಐಸಿಸಿ ಮುಖಂಡರು, ಪಕ್ಷಾತೀತವಾಗಿ ಆಗಮಿಸಿದ ಗಣ್ಯರು ಅಂತಿಮ ನಮನ ಸಲ್ಲಿಸಿದರು.

ಶರಣಪ್ರಕಾಶ್ ಪಾಟೀಲ್, ಪ್ರಿಯಾಂಕ್ ಖರ್ಗೆ, ಮುಂತಾದ ನಾಯಕರು ಅಂತಿಮ ಸಂಸ್ಕಾರ ನಡೆಯುವವರೆಗೂ ಧರ್ಮಸಿಂಗ್ ಅವರ ಪುತ್ರ ಅಜಯ್‍ಸಿಂಗ್ ಅವರ ಜೊತೆಯಾಗಿಯೇ ಇದ್ದರು. ನೆಲೊಗಿಯಲ್ಲಿ ಅಂತಿಮ ದರ್ಶನ ಮುಗಿದ ನಂತರ ಅಂತಿಮ ಸಂಸ್ಕಾರವನ್ನು ರಜಪೂತ ವಿಧಿವಿಧಾನಗಳೊಂದಿಗೆ ನೆರವೇರಿಸಲಾಯಿತು. ಅಂತ್ಯಕ್ರಿಯೆಗೆ ಆಗಮಿಸಿದ್ದ ಜನಸಮೂಹವೇ ಅವರ ಜನಪ್ರಿಯತೆಗಿಡಿದ ಕೈಗನ್ನಡಿಯಾಗಿತ್ತು.

ಹೈದರಾಬಾದ್-ಕರ್ನಾಟಕ, ಉತ್ತರ ಕರ್ನಾಟಕ ಸೇರಿದಂತೆ ರಾಜ್ಯ ಹಾಗೂ ಬೇರೆ ಬೇರೆ ರಾಜ್ಯಗಳ ವಿವಿಧೆಡೆಯಿಂದ ಗಣ್ಯಾತಿ-ಗಣ್ಯರು ಅಂತ್ಯಸಂಸ್ಕಾರಕ್ಕೆ ಆಗಮಿಸಿದ್ದರು. ಸಾಹಿತ್ಯ, ಸಾಂಸ್ಕøತಿಕ, ಸಾಮಾಜಿಕ ಎಲ್ಲಾ ಕ್ಷೇತ್ರಗಳಲ್ಲೂ ಅಪಾರ ಸ್ನೇಹಿತರನ್ನು ಹೊಂದಿದ್ದ ಧರ್ಮಸಿಂಗ್ ಅವರ ಅಂತಿಮ ದರ್ಶನ ಪಡೆಯಲು ಸಾಹಿತಿಗಳು, ಕಲಾವಿದರು, ಚಿತ್ರನಟರು, ವಿವಿಧ ಕ್ಷೇತ್ರದ ಗಣ್ಯರು ಆಗಮಿಸಿದ್ದರು.  ತಮ್ಮ ನೆಚ್ಚಿನ ನಾಯಕನ ಅಂತಿಮ ದರ್ಶನ ಪಡೆಯಲು ಜನಸಾಗರವೇ ಹರಿದುಬಂದಿತ್ತು. ನಿನ್ನೆ ನಿಧನರಾದ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರ ಹುಟ್ಟೂರಾದ ಜೇವರ್ಗಿ ತಾಲೂಕು ನೆಲೊಗಿಯಲ್ಲಿ ನೀರವ ಮೌನ ಆವರಿಸಿತ್ತು. ಅಂತಿಮ ದರ್ಶನ ಪಡೆಯಲು ಅಪಾರ ಅಭಿಮಾನಿಗಳು, ಬೆಂಬಲಿಗರು, ವಿವಿಧ ಪಕ್ಷಗಳ ಕಾರ್ಯಕರ್ತರು ಭಾರೀ ಸಂಖ್ಯೆಯಲ್ಲಿ ಆಗಮಿಸಿದ್ದು, ನೂಕುನುಗ್ಗಲು ಉಂಟಾಗಿತ್ತು. ಗಣ್ಯರಿಗೆ, ಅತಿಗಣ್ಯರಿಗೆ, ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆಯನ್ನು ಮಾಡಲಾಗಿತ್ತು. ಇಂದು ಬೆಳಗ್ಗೆ 12 ಗಂಟೆಯವರೆಗೆ ಎಂ.ವಿ.ಕಾಲೇಜು ಮೈದಾನದಲ್ಲಿ ಅಂತಿಮ ದರ್ಶನಕ್ಕ ಇಡಲಾಗಿದ್ದು, ಅಲ್ಲಿಗೆ ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿ ಅಂತಿಮ ದರ್ಶನ ಪಡೆದರು.

ಎಂ.ವಿ.ಕಾಲೇಜು ಮೈದಾನದಿಂದ ಪಾರ್ಥಿವ ಶರೀರವನ್ನು ಧರ್ಮಸಿಂಗ್ ಅವರ ಹುಟ್ಟೂರಾದ ನೆಲೊಗಿಗೆ ಕೊಂಡೊಯ್ಯಲಾಯಿತು. ನೆಲೊಗಿ ಗ್ರಾಮಸ್ಥರು ಸ್ವಯಂಪ್ರೇರಿತರಾಗಿ ಅಂತಿಮ ಸಂಸ್ಕಾರ ನಡೆಯುವ ಜಾಗದ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ನಮ್ಮ ಗ್ರಾಮದವರೊಬ್ಬ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿ ನಮಗೆಲ್ಲ ಒಳ್ಳೆಯದನ್ನು ಮಾಡಿದ್ದಾರೆ. ಅವರ ಸಾವಿನ ಸುದ್ದಿ ಕೇಳಿ ನಮಗೆ ಅತೀವ ದುಃಖವಾಗಿದೆ.

ಜೇವರ್ಗಿಯಲ್ಲಿ ಅಂತಿಮ ಸಂಸ್ಕಾರ ಮಾಡಲು ಮುಂದಾಗಿದ್ದರು. ಆದರೆ ನಮ್ಮ ನಾಯಕನ ಅಂತ್ಯಸಂಸ್ಕಾರ ನಮ್ಮ ಊರಲ್ಲೇ ನಡೆಯಬೇಕೆಂದು ಒತ್ತಾಯಿಸಿದ್ದರಿಂದ ಅಂತಿಮ ಸಂಸ್ಕಾರ ಇಲ್ಲೇ ಮಾಡಲಾಗುತ್ತಿದೆ ಎಂದು ಗ್ರಾಮದ ಮುಖಂಡರು ತಿಳಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ, ಸಚಿವರಾದ ಎಚ್.ಕೆ.ಪಾಟೀಲ್, ಶರಣಪ್ರಕಾಶ್ ಪಾಟೀಲ್, ಪ್ರಿಯಾಂಕ್‍ಖರ್ಗೆ ಸೇರಿದಂತೆ ಬಹುತೇಕ ಸಂಪುಟದ ಎಲ್ಲಾ ಸಚಿವರು, ಎಐಸಿಸಿ ಮುಖಂಡರು, ಪಕ್ಷಾತೀತವಾಗಿ ಆಗಮಿಸಿದ ಗಣ್ಯರು ಅಂತಿಮ ನಮನ ಸಲ್ಲಿಸಿದರು.

ಶರಣಪ್ರಕಾಶ್ ಪಾಟೀಲ್, ಪ್ರಿಯಾಂಕ್ ಖರ್ಗೆ, ಮುಂತಾದ ನಾಯಕರು ಅಂತಿಮ ಸಂಸ್ಕಾರ ನಡೆಯುವವರೆಗೂ ಧರ್ಮಸಿಂಗ್ ಅವರ ಪುತ್ರ ಅಜಯ್‍ಸಿಂಗ್ ಅವರ ಜೊತೆಯಾಗಿಯೇ ಇದ್ದರು. ನೆಲೊಗಿಯಲ್ಲಿ ಅಂತಿಮ ದರ್ಶನ ಮುಗಿದ ನಂತರ ಅಂತಿಮ ಸಂಸ್ಕಾರವನ್ನು ರಜಪೂತ ವಿಧಿವಿಧಾನಗಳೊಂದಿಗೆ ನೆರವೇರಿಸಲಾಯಿತು. ಅಂತ್ಯಕ್ರಿಯೆಗೆ ಆಗಮಿಸಿದ್ದ ಜನಸಮೂಹವೇ ಅವರ ಜನಪ್ರಿಯತೆಗಿಡಿದ ಕೈಗನ್ನಡಿಯಾಗಿತ್ತು.

ಹೈದರಾಬಾದ್-ಕರ್ನಾಟಕ, ಉತ್ತರ ಕರ್ನಾಟಕ ಸೇರಿದಂತೆ ರಾಜ್ಯ ಹಾಗೂ ಬೇರೆ ಬೇರೆ ರಾಜ್ಯಗಳ ವಿವಿಧೆಡೆಯಿಂದ ಗಣ್ಯಾತಿ-ಗಣ್ಯರು ಅಂತ್ಯಸಂಸ್ಕಾರಕ್ಕೆ ಆಗಮಿಸಿದ್ದರು. ಸಾಹಿತ್ಯ, ಸಾಂಸ್ಕøತಿಕ, ಸಾಮಾಜಿಕ ಎಲ್ಲಾ ಕ್ಷೇತ್ರಗಳಲ್ಲೂ ಅಪಾರ ಸ್ನೇಹಿತರನ್ನು ಹೊಂದಿದ್ದ ಧರ್ಮಸಿಂಗ್ ಅವರ ಅಂತಿಮ ದರ್ಶನ ಪಡೆಯಲು ಸಾಹಿತಿಗಳು, ಕಲಾವಿದರು, ಚಿತ್ರನಟರು, ವಿವಿಧ ಕ್ಷೇತ್ರದ ಗಣ್ಯರು ಆಗಮಿಸಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin