ಹಿರಿಯ ಸ್ವಾತಂತ್ರ್ಯ ಹೋರಾಟಗಾರ ನಿಧನ

ಈ ಸುದ್ದಿಯನ್ನು ಶೇರ್ ಮಾಡಿ

Freedom--01

ತುಮಕೂರು, ಜು.28- ಮಹಾತ್ಮ ಗಾಂಧೀಜಿಯವರೊಂದಿಗೆ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡು ಸೆರೆವಾಸ ಅನುಭವಿಸಿದ್ದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಂ.ಎಚ್.ನರಸಿಂಹಯ್ಯ (94) ನಿಧನರಾಗಿದ್ದಾರೆ.  ತುರುವೇಕೆರೆ ತಾಲೂಕಿನ ಮಾಯಸಂದ್ರ ಮೂಲದವರಾದ ನರಸಿಂಹಯ್ಯ ಅವರು ಸ್ವತಂತ್ರ್ಯಪೂರ್ವ ಚಳವಳಿಯ ಅನೇಕ ಹೋರಾಟಗಳಲ್ಲಿ ಪಾಲ್ಗೊಂಡಿದ್ದರು.

ಗಾಂಧೀಜಿಯವರ ಜತೆಯಲ್ಲೂ ಸಹ ಹೋರಾಟದಲ್ಲಿ ಪಾಲ್ಗೊಂಡು ಸೆರೆವಾಸ ಅನುಭವಿಸಿದ್ದ ಇವರು ತಡರಾತ್ರಿ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಇಬ್ಬರು ಪುತ್ರಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin