10 ಲಕ್ಷ ಬಿಪಿಎಲ್ ಕುಟುಂಬಗಳಿಗೆ ‘ಅನಿಲಭಾಗ್ಯ’

ಈ ಸುದ್ದಿಯನ್ನು ಶೇರ್ ಮಾಡಿ

LPG--01

ತುಮಕೂರು, ಜು.28- ಕರ್ನಾಟಕ ರಾಜ್ಯ ಸರಕಾರವೂ ರಾಜ್ಯದಲ್ಲಿರುವ ಸುಮಾರು 10ಲಕ್ಷ ಬಿ.ಪಿ.ಎಲ್ ಕುಟುಂಬಗಳಿಗೆ ಉಚಿತವಾಗಿ ಅಡುಗೆ ಅನಿಲ ಸಂಪರ್ಕ ನೀಡುವ ಮುಖ್ಯಮಂತ್ರಿಗಳ ಅನಿಲ ಭಾಗ್ಯ ಯೋಜನೆಯನ್ನು ಆರಂಭಿಸಲು ಸಚಿವ ಸಂಪುಟದಲ್ಲಿ ಒಪ್ಪಿಗೆ ದೊರೆತಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ. ಸುದ್ದಿಗ್ಠೋಯಲ್ಲಿ ಮಾತನಾಡಿದ ಅವರು, ಒಂದು ಕುಟುಂಬಕ್ಕೆ ಅಡುಗೆ ಅನಿಲ ಸಂಪರ್ಕ,ಸಿಲಿಂಡರ್,ಸ್ಟೌವ ಒಳಗೊಂಡ 3000 ರೂಗಳ ಪ್ಯಾಕೇಜ್‍ನ್ನು ನೀಡುತ್ತಿದ್ದು,ಇದಕ್ಕಾಗಿ 300 ಕೋಟಿ ರೂಗಳನ್ನು ಮೀಸಲಿರಿಸಲು ಸಹ ಮುಂದಾಗಿದೆ ಎಂದರು.

ಕೇಂದ್ರದ ಪ್ರಧಾನ ಮಂತ್ರಿಗಳ ಉಜ್ವಲ ಯೋಜನೆಯಲ್ಲಿ ಅಡುಗೆ ಅನಿಲ ಸಂಪರ್ಕ ನೀಡಿ, ಸಾಲದ ಬಾಂಡ್ ನೀಡಿ,ಕುಟುಂಬಕ್ಕೆ ಸರಕಾರ ನೀಡುವ ಸಬ್ಸಿಡಿ ಹಣವನ್ನು ಸಾಲಕ್ಕೆ ಕಡಿತ ಮಾಡಿಕೊಳ್ಳಲಾಗುತ್ತಿದೆ.ಆದರೆ ಮುಖ್ಯಮಂತ್ರಿಗಳ ಅನಿಲ ಭಾಗ್ಯ ಯೋಜನೆಯಲ್ಲಿ ಬಿಪಿಎಲ್ ಕುಟುಂಬಗಳ ಮೇಲೆ ಯಾವುದೇ ಸಾಲ ಹೊರಿಸದೆ, ಸರಕಾರ ಇಡೀ ಸಂಪರ್ಕಕ್ಕೆ ತಗಲುವ 3000 ರೂ ಖರ್ಚನ್ನು ಭರಿಸಿ, ಸಂಪೂರ್ಣವಾಗಿ ಉಚಿತವಾಗಿ ಗ್ಯಾಸ್ ಸಂಪರ್ಕ ತರಿಸಲಾಗುತ್ತಿದೆ.ಶೀಘ್ರದಲ್ಲಿಯೇ ಈ ಬಗ್ಗೆ ಸರಕಾರಿ ಆದೇಶ ಹೊರಬಿಳಲಿದೆ ಎಂದು ಟಿ.ಬಿ.ಜಯಚಂದ್ರ ತಿಳಿಸಿದರು.

ಶ್ರದ್ಧಾಂಜಲಿ:

ಮಾಜಿ ಮುಖ್ಯಮಂತ್ರಿ ಎನ್.ಧರಂಸಿಂಗ್ ಅವರ ಅಕಾಲಿಕ ನಿಧನಕ್ಕೆ ಕಾನೂನು ಸಂಸದೀಯ ವ್ಯವಹಾರಗಳು, ಸಣ್ಣ ನೀರಾವರಿ ಮತ್ತು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಟಿ.ಬಿ.ಜಯಚಂದ್ರ ಅವರು ತಮ್ಮ ಅತೀವ ಸಂತಾಪವನ್ನು ಸೂಚಿಸಿದ್ದಾರೆ.   ಧರಂಸಿಂಗ್ ಅವರು ಮುಖ್ಯಮಂತ್ರಿಗಳಾಗಿದ್ದಾಗ ಹಾಗೂ ನೀರಾವರಿ ಸಚಿವರಾಗಿದ್ದಾಗ ತುಮಕೂರು ಜಿಲ್ಲೆಯ ಶಿರಾ ಮತ್ತು ಕಳ್ಳಂಬೆಳ್ಳ ಭಾಗದ ರೈತರಿಗೆ ಅನುಕೂಲವಾಗುವಂತೆ ನೀರಾವರಿ ಸೌಲಭ್ಯಗಳನ್ನು ಕಲ್ಪಿಸಿದ್ದರು ಎಂದು ಸ್ಮರಿಸಿ, ನಾಡುಕಂಡ ಅಪರೂಪದ ಮೇರು ವ್ಯಕ್ತಿತ್ವದ ರಾಜಕಾರಣಿ ಎಂದು ಬಣ್ಣಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin