ಮಾರುಕಟ್ಟೆಗೆ ಬಂದ ಗಣೇಶ

Ganesha--01

ಬೆಂಗಳೂರು, ಜು.29- ನಗರ ಸೇರಿದಂತೆ ರಾಜ್ಯಾದ್ಯಂತ ಗಣೇಶ ಮೂರ್ತಿಗಳ ಮಾರಾಟ ಜೋರಾಗಿದೆ. ಆದರೆ, ಈ ಬಾರಿಯೂ ಕೂಡಾ ಪಿಒಪಿ ಗಣೇಶ ಮೂರ್ತಿಗಳ ಸಂಖ್ಯೆಯೇ ಹೆಚ್ಚಾಗಿದ್ದು, ಈ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯೋಜನೆ ರೂಪಿಸಿದೆ.
ಮುಂದಿನ ವಾರದಿಂದ ಮಂಡಳಿ ರಾಜ್ಯದ ಶಾಲಾ ಕಾಲೇಜುಗಳಲ್ಲಿ ಮಣ್ಣಿನ ಗಣೇಶ ಮೂರ್ತಿಯ ಬಳಕೆ ಬಗ್ಗೆ ಅರಿವು ಮೂಡಿಸಲಿದೆ. ಪಿಒಪಿ ಗಣೇಶ ಮೂರ್ತಿಗಳನ್ನು ಕೆರೆ-ನದಿಗಳಲ್ಲಿ ವಿಸರ್ಜನೆ ಮಾಡುವುದರಿಂದ ಮಾಲಿನ್ಯ ಉಂಟಾಗಲಿದೆ.

ಹೀಗಾಗಿ ಮಕ್ಕಳಲ್ಲಿ ಈ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಂಡಳಿ ಅಭಿಯಾನಕ್ಕೆ ಮುಂದಾಗಿದೆ. ಅಲ್ಲದೆ ಹೋಬಳಿ ಮಟ್ಟದ ಶಾಲೆಗಳಲ್ಲೂ ಸಹ ಮಣ್ಣಿನ ಮೂರ್ತಿ ತಯಾರಿಸುವ ತರಬೇತಿಯನ್ನು ನೀಡಲು ಸಿದ್ಧವಾಗಿದೆ. ಇದಲ್ಲದೇ ಪಿಒಪಿ ಹಾಗೂ ಬಣ್ಣದ ಗಣೇಶ ಮೂರ್ತಿಗಳ ಬಳಕೆಯಿಂದ ಉಂಟಾಗುವ ಮಾಲಿನ್ಯದ ಬಗ್ಗೆ ಜಾಗೃತಿ ಮೂಡಿಸುವಂತಹ ಜಾಹೀರಾತು ನೀಡುವಂತೆ ಸ್ಥಳೀಯ ಪ್ರಾಧಿಕಾರಗಳು ಹಾಗೂ ಜಿಲ್ಲಾಧಿಕಾರಿಗಳಿಗೆ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚಿಸಿದೆ. ಗಡಿ ಭಾಗಗಳ ಚೆಕ್ ಪೋಸ್ಟ್ ಗಳಲ್ಲಿ ಪರಿಶೀಲಿಸಿ ಪಿಒಪಿ ಮೂರ್ತಿಗಳನ್ನು ವಶಕ್ಕೆ ಪಡೆಯುವಂತೆಯೂ ಮಂಡಳಿ ಆದೇಶಿಸಿದೆ. ಒಟ್ಟಿನಲ್ಲಿ ರಾಜ್ಯದ ಎಲ್ಲೆಡೆ ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಿಸಲು ಮಂಡಳಿ ಸಿದ್ಧತೆ ಆರಂಭಿಸಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin