ಆರ್‍ಎಸ್‍ಎಸ್ ಕಾರ್ಯಕರ್ತರ ಕೈ ಕತ್ತರಿಸಿ ಕಗ್ಗೊಲೆ : ಕೇರಳದಲ್ಲಿ ಬಿಜೆಪಿ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

RSS--01

ತಿರುವನಂತಪುರಂ, ಜು.30-ಕುಖ್ಯಾತ ರೌಡಿ ನೇತೃತ್ವದ ತಂಡವೊಂದು ಆರ್‍ಎಸ್‍ಎಸ್ ಕಾರ್ಯಕರ್ತರ ಕೈ ಕತ್ತರಿಸಿ ಭೀಕರವಾಗಿ ಕೊಲೆ ಮಾಡಿದ ಘಟನೆ ಕೇರಳ ರಾಜಧಾನಿ ತಿರುವನಂತಪುರಂನಲ್ಲಿ ನಡೆದಿದೆ. ಈ ಕೃತ್ಯವನ್ನು ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಇಂದು ಪ್ರತಿಭಟನೆ ನಡೆಸುತ್ತಿದೆ.   ನಿನ್ನೆ ರಾತ್ರಿ 9ರ ಸುಮಾರಿನಲ್ಲಿ ದುಷ್ಕರ್ಮಿಗಳ ಗುಂಪೊಂದು ದಾಳಿ ನಡೆಸಿ ರಾಜೇಶ್(34) ಎಂಬ ಆರ್‍ಎಸ್‍ಎಸ್ ಕಾರ್ಯಕರ್ತನ ಎಡಗೈ ಕತ್ತರಿಸಿ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದೆ.

ಈ ದಾಳಿ ಹಿಂದೆ ಸಿಪಿಐ-ಎಂ ಕೈವಾಡ ಇದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಕುಮನಮ್ ರಾಜಶೇಖರನ್ ಆರೋಪಿಸಿದ್ಧಾರೆ. ಆದರೆ ಈ ಆಪಾದನೆಯನ್ನು ಜಿಲ್ಲಾ ಸಿಪಿಎಂ ಘಟಕ ತಳ್ಳಿ ಹಾಕಿದೆ.  ಈ ಕೃತ್ಯವನ್ನು ಖಂಡಿಸಿ ಬಿಜೆಪಿ ಇಂದು ರಾಜ್ಯವ್ಯಾಪಿ ಬಂದ್‍ಗೆ ಕರೆ ನೀಡಿದ್ದು, ಪ್ರತಿಭಟನೆ ನಡೆಯುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.  ಈ ಅತ್ಯೆ ಪ್ರಕರಣ ಸಂಬಂಧ 8 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೇರಳದಲ್ಲಿ ಬಿಜೆಪಿ ಮತ್ತು ಸಿಪಿಎಂ ಕಾರ್ಯಕರ್ತರ ನಡುವೆ ಘರ್ಷಣೆ ಮತ್ತಷ್ಟು ಉಲ್ಬಣಗೊಂಡಿದ್ದು, ತಿರುವನಂತರಪುರಂನ ರಾಜ್ಯ ಬಿಜೆಪಿ ಕಚೇರಿ ಮೇಲೆ ನಡೆದ ದಾಳಿ ಮತ್ತು ಸಿಪಿಎಂ ರಾಜ್ಯ ಕಾರ್ಯದರ್ಶಿ ಬಾಲಕೃಷ್ಣ ಅವರ ಪುತ್ರ ಬಿನೀಶ್ ಮೇಲೆ ನಡೆದ ಆಕ್ರಮಣದ ನಂತರ ಜು.28ರಿಂದ ಮೂರು ದಿನಗಳ ಕಾಲ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin