ಎನ್‍ಕೌಂಟರ್’ನಲ್ಲಿ ಇಬ್ಬರು ಉಗ್ರರ ಹತ್ಯೆ

Encounter--01

ಶ್ರೀನಗರ, ಜು.30-ಕಾಶ್ಮೀರದಲ್ಲಿ ಭದ್ರತಾಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ದಿನನಿತ್ಯದ ಸುದ್ದಿಯಾಗುತ್ತಿದೆ. ಪುಲ್ವಾಮಾ ಜಿಲ್ಲೆಯಲ್ಲಿ ಇಂದು ನಡೆದ ಎನ್‍ಕೌಂಟರ್‍ನಲ್ಲಿ ಯೋಧರು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಪುಲ್ವಾಮಾ ಜಿಲ್ಲೆಯ ತಹಾಬ್ ಪ್ರದೇಶದಲ್ಲಿ ಉಗ್ರರಿದ್ದಾರೆ ಎಂಬ ಖಚಿತ ಸುಳಿವಿನ ಮೇಲೆ ಭದ್ರತಾ ಪಡೆಗಳು ನಿನ್ನೆ ರಾತ್ರಿ ಆ ಸ್ಥಳವನ್ನು ಸುತ್ತುವರಿದು ತೀವ್ರ ಶೋಧ ನಡೆಸುತ್ತಿದ್ದವು.

ಇದೇ ಸಂದರ್ಭದಲ್ಲಿ ಇಂದು ಮುಂಜಾನೆ ಭಯೋತ್ಪಾದಕರು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದರು. ನಂತರ ನಡೆದ ಎನ್‍ಕೌಂಟರ್‍ನಲ್ಲಿ ಇಬ್ಬರು ಉಗ್ರರು ಹತರಾದರು.   ಹತರಾದ ಉಗ್ರರಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರದೇಶದಲ್ಲಿ ಅಡಗಿರಬಹುದಾದ ಇನ್ನಿತರ ಭಯೋತ್ಪಾದಕರಿಗಾಗಿ ಶೋಧ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin