ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ ಆಳ್ವಾಸ್ ವಿದ್ಯಾರ್ಥಿನಿ ಕಾವ್ಯಾ ಸಾವಿನ ಪ್ರಕರಣ

Kavya-Alva's

ಬೆಂಗಳೂರು, ಜು.30- ರಾಜ್ಯದ ಪ್ರತಿಷ್ಠಿತ ಮೂಡಬಿದರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿನಿ ಕಾವ್ಯಾ ನಿಗೂಢ ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ವಿದ್ಯಾರ್ಥಿನಿ ನಿಗೂಢ ಸಾವಿನ ತನಿಖೆಯನ್ನು ಸೂಕ್ತ ರೀತಿಯಲ್ಲಿ ನಡೆಸಬೇಕೆಂದು ಪಿಎಫ್‍ಐ ಕಾರ್ಯಕರ್ತರು ಮೂಡಬಿದರೆಯಲ್ಲಿ ಪ್ರತಿಭಟನೆ ಮಾಡಿದರೆ, ಡಿವೈಎಫ್‍ಐ ಮತ್ತು ಎಸ್‍ಎಫ್‍ಐ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ನಿನ್ನೆ ಎಬಿವಿಪಿ ವಿದ್ಯಾರ್ಥಿ ಸಂಘಟನೆ ಕೂಡ ಪ್ರತಿಭಟನೆ ನಡೆಸಿ ಕಾವ್ಯಶ್ರೀ ಸಾವಿನ ಸತ್ಯಾಂಶ ಹೊರಬರಬೇಕೆಂದು ಆಗ್ರಹಿಸಿದ್ದರು.

ಈ ನಡುವೆ ಆಳ್ವಾಸ್ ಶಿಕ್ಷಣ ಸಂಸ್ಥೆ ಮುಖ್ಯಸ್ಥರಾದ ಮೋಹನ್ ಆಳ್ವ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿ ಪ್ರಕರಣದ ಸೂಕ್ತ ತನಿಖೆ ನಡೆಯಬೇಕೆಂಬುದು ನನ್ನ ಆಗ್ರಹವೂ ಕೂಡ ಆಗಿದೆ. ಅವರಿಗಷ್ಟೆ ಅಲ್ಲ, ನನ್ನ ಸಂಸ್ಥೆಗೂ ನ್ಯಾಯ ಸಿಗಬೇಕಿದೆ ಎಂದು ಹೇಳಿದ್ದಾರೆ. ಕಾವ್ಯಶ್ರೀ ತಾಯಿಯವರು ದೈಹಿಕ ಶಿಕ್ಷಕರ ಮೇಲೆ ಅನುಮಾನ ವ್ಯಕ್ತಪಡಿಸಿದ್ದು, ಈ ನಿಟ್ಟಿನಲ್ಲಿ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.  ಪ್ರಕರಣದ ಬಗ್ಗೆ ಎಸಿಪಿ ತನಿಖೆಗೆ ಆಗ್ರಹಿಸಿದ್ದು, ತನಿಖಾ ತಂಡ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin