ಪ್ರವಾಹ ಸಂತ್ರಸ್ತರಿಗೆ ನೆರವು ನೀಡುವಂತೆ ದೇಶವಾಸಿಗಳಿಗೆ ಪ್ರಧಾನಿ ಮೋದಿ ಮನವಿ

ಈ ಸುದ್ದಿಯನ್ನು ಶೇರ್ ಮಾಡಿ

Man-Ki-Baat

ನವದೆಹಲಿ, ಜು.30-ದೇಶದ ವಿವಿಧ ರಾಜ್ಯಗಳಲ್ಲಿ ತಲೆದೋರಿರುವ ಪ್ರವಾಹದಿಂದ ತೀವ್ರ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಸಂತ್ರಸ್ತರಾದವರಿಗೆ ನೆರವು ನೀಡಲು ಸರ್ಕಾರದೊಂದಿಗೆ ಕೈಜೋಡಿಸುವಂತೆ ದೇಶದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಪ್ರತಿ ತಿಂಗಳ ಕೊನೆ ಭಾನುವಾರ ಬಿತ್ತರವಾಗುವ ಮನ್ ಕೀ ಬಾತ್ (ಮನದ ಮಾತು) ಬಾನುಲಿ ಕಾರ್ಯಕ್ರಮದ 34ನೇ ಆವೃತ್ತಿಯಲ್ಲಿ ಮಾತನಾಡಿದ ಅವರು, ಅಸ್ಸಾಂ ಸೇರಿದಂತೆ ಈಶಾನ್ಯ ಭಾರತದ ರಾಜ್ಯಗಳು, ಉತ್ತರಪ್ರದೇಶ, ಗುಜರಾತ್ ಮೊದಲಾದ ಪ್ರಾಂತ್ಯಗಳು ಭಾರೀ ಮಳೆ ಮತ್ತು ನೆರೆ ಹಾವಳಿಯಿಂದ ತತ್ತರಿಸಿವೆ. ಸಾವು-ನೋವು ಸಂಭವಿಸಿವೆ. ಲಕ್ಷಾಂತರ ಜನರು ಸಂಕಷ್ಟಕ್ಕೀಡಾಗಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಜುಲೈ 1ರಿಂದ ದೇಶಾದ್ಯಂತ ಜಾರಿಗೆ ಬಂದಿರುವ ಸರಕುಗಳು ಮತ್ತು ಸೇವೆಗಳ ತೆರಿಗೆ (ಜಿಎಸ್‍ಟಿ) ಕುರಿತು ಪ್ರಸ್ತಾಪಿಸಿದ ಮೋದಿ, ಈ ತೆರಿಗೆ ಪದ್ದತಿ ಜಾರಿಯಿಂದ ಹಲವಾರು ಅನುಕೂಲಗಳಿವೆ. ದೇಶದ ಅರ್ಥಿಕ ವ್ಯವಸ್ಥೆ ಮೇಲೆ ಸಕಾರಾತ್ಮಕ ಪರಿಣಾಮ ಬೀರಿವೆ. ಅನೇಕ ಅಗತ್ಯ ವಸ್ತುಗಳು ಮತ್ತು ಉತ್ಪನ್ನಗಳ ಬೆಲೆ ಸಾಕಷ್ಟು ಇಳಿಕೆಯಾಗಿದೆ ಎಂದು ಹೇಳಿದರು.

ಭಾರತದ ಪಾಲಿಗೆ ಆಗಸ್ಟ್ ಕ್ರಾಂತಿಕಾರಿ ಮಾಸ. ಬ್ರಿಟಿಷರ ವಿರುದ್ಧ ನಡೆದ ಭಾರತ ಬಿಟ್ಟು ತೊಲಗಿ ಚಳವಳಿ ಯಶಸ್ವಿಯಾದ ತಿಂಗಳು. ಭಾರತಕ್ಕೆ ಸ್ವಾತಂತ್ರ ದಕ್ಕಿಸಿಕೊಡಲು ಸಾವಿರಾರು ದೇಶಪ್ರೇಮಿಗಳು ತಾಗ್ಯ-ಬಲಿದಾನ ಮಾಡಿದ್ದಾರೆ ಎಂದು ನರೇಂದ್ರ ಮೋದಿ ಮನ್ ಕೀ ಬಾತ್‍ನಲ್ಲಿ ಸ್ಮರಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin