‘ಬಸವಣ್ಣನವರು ಆತ್ಮಹತ್ಯೆ ಮಾಡಿಕೊಂಡರು’ : ಲಕ್ಷ್ಮೀ ಹೆಬ್ಬಾಳ್ಕರ್ ವಿವಾದಿತ ಹೇಳಿಕೆ

ಈ ಸುದ್ದಿಯನ್ನು ಶೇರ್ ಮಾಡಿ

Laxmi-Hebbalkar

ಬೆಳಗಾವಿ,ಜು.30- ಸಮಾಜದಲ್ಲಿರುವ ಸಮಸ್ಯೆಗಳನ್ನು ವಚನಗಳ ಮೂಲಕ ತಿದ್ದಲು ಹೊರಟ ಮಹಾನ್ ಮಾನವತಾವಾದಿ ಬಸವಣ್ಣ ಕೊನೆಗೆ ಏನಾದರೂ…. ಆತ್ಮಹತ್ಯೆ ಮಾಡಿಕೊಂಡರು ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜಿಲ್ಲೆಯ ಸಂಕೇಶ್ವರ್‍ದಲ್ಲಿ ಆಯೋಜಿಸಿದ್ದ ಬೂತ್ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಸಮಾಜದ ಅಂಕು ಡೊಂಕುಗಳನ್ನು ವಚನಗಳ ಮೂಲಕ ತಿದ್ದಲು ಹೊರಟ ಅವರು ಕೊನೆಗೆ ಆತ್ಮಹತ್ಯೆ ಮಾಡಿಕೊಂಡರು ಎನ್ನುವ ಹೇಳಿಕೆ ನೀಡಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದು, ಬಸವಣ್ಣ ನವರ ಅನುಯಾಯಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಬಸವದಳ ಕಾರ್ಯಕರ್ತರು ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಘೇರಾವ್ ಹಾಕಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin