ಇನ್ನು ಒಂದು ವಾರ ಉತ್ತಮ ಮಳೆಯಾಗುವ ಲಕ್ಷಣಗಳಿಲ್ಲ

Weather--01

ಬೆಂಗಳೂರು, ಜು.31- ಕಳೆದ ಎರಡು ತಿಂಗಳಿನಲ್ಲಿ ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆ ಕೊರತೆ ತೀವ್ರವಾಗಿದ್ದು, ಇನ್ನೊಂದು ವಾರ ಕಾಲ ಉತ್ತಮ ಮಳೆಯಾಗುವ ಲಕ್ಷಣಗಳಿಲ್ಲ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಹವಮಾನ ತಜ್ಞ ವಿ.ಎಸ್.ಪ್ರಕಾಶ್ ಅವರ ಪ್ರಕಾರ ಮುಂಗಾರು ಮಳೆ ಇನ್ನೂ ಒಂದು ವಾರ ಕಾಲ ದುರ್ಬಲವಾಗಿಯೇ ಮುಂದುವರೆಯಲಿದೆ ಎಂದು ಹೇಳಿದ್ದಾರೆ.

ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಲಕ್ಷಣಗಳಿಲ್ಲ. ಚದುರಿದಂತೆ ಅಲ್ಲಲ್ಲಿ ಸಾಧಾರಣ ಮಳೆ ಮುಂದುವರೆಯಲಿದೆ ಎಂದಿದ್ದಾರೆ.ಆ.6ಮತ್ತು 7ರಂದು ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಗಳು ಗೋಚರಿಸುತ್ತಿವೆ. ಆದರೆ, ಉತ್ತರ ಒಳನಾಡಿನಲ್ಲಿ ಇನ್ನೂ ಎರಡು ವಾರಗಳ ಕಾಲ ಉತ್ತಮ ಮಳೆಯಾಗುವ ಲಕ್ಷಣಗಳು ಕಂಡು ಬರುತ್ತಿಲ್ಲ ಎಂದು ತಿಳಿಸಿದ್ದಾರೆ.

ವಾತಾವರಣದಲ್ಲಿ ವಾಯುಭಾರ ಕುಸಿತ ಅಥವಾ ಸುಳಿಗಾಳಿಯಂತಹ ಲಕ್ಷಣಗಳು ಕಂಡುಬರುತ್ತಿಲ್ಲ. ಹೀಗಾಗಿ ಮುಂಗಾರು ಮಳೆ ದುರ್ಬಲಗೊಂಡಿದೆ. ಉತ್ತಮ ಮಳೆಯಾಗುವ ಲಕ್ಷಣಗಳೂ ಇಲ್ಲ. ಹಲವೆಡೆ ಬಿತ್ತಿದ ಬೆಳೆಯೂ ಒಣಗುತ್ತಿವೆ. ಈ ಬಾರಿಯೂ ಕೂಡ ಕುಡಿಯುವ ನೀರು, ಜಾನುವಾರುಗಳ ಮೇವಿನ ಸಮಸ್ಯೆ ಉಂಟಾಗುವ ಲಕ್ಷಣಗಳೇ ಹೆಚ್ಚಾಗಿ ಕಂಡು ಬರುತ್ತಿವೆ. ಇನ್ನೂ ಕೆಲವೆಡೆ ಬಿತ್ತನೆಯೇ ನಡೆದಿಲ್ಲ. ಹಲವು ಜಿಲ್ಲೆಗಳಲ್ಲಿ ತೇವಾಂಶವೇ ಕಂಡು ಬರುತ್ತಿಲ್ಲ ಎಂದು ಹೇಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin