ಪಟಾಕಿ ಗೋದಾಮಿನಲ್ಲಿ ಬೆಂಕಿಬಿದ್ದು ಇಬ್ಬರು ಬಾಲಕರು ಸುಟ್ಟು ಕರಕಲು

Blast--01

ತಿರುಪತಿ, ಜು.31-ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡು ಸಂಗ್ರಹಿಸಿಡಲಾಗಿದ್ದ ಪಟಾಕಿಗಳು ಸ್ಫೋಟಗೊಂಡ ಪರಿಣಾಮ ಇಬ್ಬರು ಬಾಲಕರು ಸುಟ್ಟು ಕರಕಲಾಗಿರುವ ದಾರುಣ ಘಟನೆ ಆಂಧ್ರಪ್ರದೇಶದ ತಿರುಪತಿಯಲ್ಲಿ ಸಂಭವಿಸಿದೆ. ಈ ದುರಂತದಲ್ಲಿ ಮಹಿಳೆಯೊಬ್ಬರಿಗೆ ತೀವ್ರ ಗಾಯಗಳಾಗಿವೆ.
ತಿರುಪತಿಯ ಮಿತ್ರ ಗಾಂಧಿಪುರಂ ಬಡಾವಣೆಯಲ್ಲಿ ನಿನ್ನೆ ಈ ಘಟನೆ ನಡೆದಿದೆ.

ಸ್ಫೋಟದ ತೀವ್ರತೆಯಿಂದಾಗಿ ಗೋದಾಮು ಕುಸಿತಗೊಂಡಿತು. ಕಟ್ಟಡದ ಅವಶೇಷಗಳಡಿ ಸುಟ್ಟು ಕರಕಲಾಗಿ ನಜ್ಜುಗುಜ್ಜಾಗಿದ್ದ 14 ಮತ್ತು 10 ವರ್ಷದ ಬಾಲಕರ ಮೃತದೇಹಗಳನ್ನು ಪೊಲೀಸ್ ಮತ್ತು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಹೊರ ತೆಗೆದಿದ್ದಾರೆ. ತೀವ್ರ ಗಾಯಗೊಂಡ ಮಹಿಳೆಯನ್ನು ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ. ಘಟನೆ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin