ಬಿ.ಎಸ್.ಯಡಿಯೂರಪ್ಪಗೆ ಮತ್ತೆ ಅಗ್ನಿಪರೀಕ್ಷೆ
ಬೆಂಗಳೂರು,ಜು.31-ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಸೆಪ್ಟೆಂಬರ್ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಅಗ್ನಿಪರೀಕ್ಷೆ ಎದುರಾಗಲಿದೆ. ಬಿಎಸ್ವೈ ಅವರ ವಿರುದ್ಧ ದಾಖಲಾಗಿದ್ದ 15 ಡಿನೋಟಿಫಿಕೇಷನ್ ಪ್ರಕರಣಗಳ ವಿಚಾರಣೆ ನಡೆಸಿದ್ದ ರಾಜ್ಯ ಹೈಕೋರ್ಟ್ ಎಲ್ಲವನ್ನು ರದ್ದು ಮಾಡಿತ್ತು. ಆದರೆ ರಾಜ್ಯ ಸರ್ಕಾರ ಪ್ರಕರಣವನ್ನು ಕೈಬಿಡಲು ಒಪ್ಪದೆ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿರುವ ಸುಪ್ರೀಂಕೋರ್ಟ್ ಸೆಪ್ಟೆಂಬರ್ನಲ್ಲಿ ವಿಚಾರಣೆ ನಡೆಸುವುದಾಗಿ ಹೇಳಿದೆ. ಹೀಗಾಗಿ ಬಿಎಸ್ವೈಗೆ ಮತ್ತೆ ಸಂಕಷ್ಟ ಎದುರಾಗಿದೆ.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS
Facebook Comments