ಸಿದ್ದಗಂಗಾ ಮಠಕ್ಕೆ ಭೇಟಿಕೊಟ್ಟ ಮೈಸೂರು ಮಹಾರಾಜ

ಈ ಸುದ್ದಿಯನ್ನು ಶೇರ್ ಮಾಡಿ

Siddaganga-Mutt

ತುಮಕೂರು, ಜು 31-ಮೈಸೂರಿನ ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಡಾ.ಶ್ರೀ ಶಿವಕುಮಾರಸ್ವಾಮೀಜಿಯವರ ಆರೋಗ್ಯ ವಿಚಾರಿಸಿ ಆಶೀರ್ವಾದ ಪಡೆದರು.  ಇಂದು ಬೆಳಗ್ಗೆ ಯದುವೀರ ಮಹಾರಾಜರು ಶ್ರೀಗಳನ್ನು ಭೇಟಿ ಮಾಡಿ ಸುಮಾರು 20 ನಿಮಿಷಕ್ಕೂ ಹೆಚ್ಚು ಕಾಲ ಪ್ರಸ್ತುತ ರಾಜ್ಯದ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದರು. ನಿಮ್ಮ ಕಾಲಘಟ್ಟದಲ್ಲಿ ನಾವೆಲ್ಲ ಇರುವುದೇ ಸೌಭಾಗ್ಯ ಎಂದು ಹೇಳಿದಾಗ ಯದುವೀರ ಮಹಾರಾಜರ ಕ್ರಿಯಾಶೀಲತೆಗೆ ಶ್ರೀಗಳು ಮುಗುಳ್ನಕ್ಕರು.

Siddaganga-Mutt-01

ನಂತರ ಮಾತನಾಡಿದ ಮಹಾರಾಜರು, ತಿಪಟೂರಿಗೆ ಕಾರ್ಯಕ್ರಮದ ನಿಮಿತ್ತ ಆಗಮಿಸಿದ್ದು, ಪಟ್ಟಾಭಿಷೇಕದ ನಂತರ ನಾನು ಶ್ರೀಮಠಕ್ಕೆ ಬರಲು ಸಾಧ್ಯವಾಗಿರಲಿಲ್ಲ. ಹಾಗಾಗಿ ಇದೀಗ ಮಠಕ್ಕೆ ಬಂದು ಶ್ರೀಗಳ ಆಶೀರ್ವಾದ ಪಡೆದುದಾಗಿ ತಿಳಿಸಿದರು. ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಆಡಳಿತ ನಡೆಸುವ ಸರ್ಕಾರಗಳು ಕುಂಭಕರ್ಣ ನಿದ್ದೆಯಿಂದ ಮೇಲೇಳಬೇಕಿದೆ. ಸರ್ಕಾರಗಳು ಕ್ರಿಯಾಶೀಲವಾಗಿ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಮನವಿ ಮಾಡಿದರು. ಹಲವು ತಾಲೂಕುಗಳಲ್ಲಿ ನೀರಿನ ಸಮಸ್ಯೆ ಕಂಡು ಬಂದಿದೆ. ಪ್ರಸ್ತುತ ಸಮಸ್ಯೆ ಎದುರಿಸಲು ಸರ್ಕಾರದ ಜೊತೆ ಎಲ್ಲರೂ ಸಕ್ರಿಯರಾಗಿ ತೊಡಗಿಕೊಳ್ಳುವಂತೆ ಸಲಹೆ ನೀಡಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin