ಹೇಮಾವತಿ ನೀರಿಗಾಗಿ ಅಮರಣಾಂತ ಉಪವಾಸ ಕೂತ ಮಾಜಿ ಸಚಿವ

Sogadu-Shivanna--01

ತುಮಕೂರು, ಜು.31- ಜಿಲ್ಲೆಗೆ ಹೇಮಾವತಿ ನೀರು ಹರಿಸಲು ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ನೀಡಿದ ಭರವಸೆ ಈಡೇರದ ಹಿನ್ನೆಲೆಯಲ್ಲಿ ಇಂದಿನಿಂದ ಮಾಜಿ ಸಚಿವ ಸೊಗಡು ಶಿವಣ್ಣ ಅಮರಣಾಂತ ಉಪವಾಸ ಕೈಗೊಂಡಿದ್ದಾರೆ. ಹೇಮಾವತಿ ನೀರಿಗಾಗಿ ಈ ಹಿಂದೆ ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತರು ಮತ್ತು ಬಿಜೆಪಿ ಕಾರ್ಯಕರ್ತರ ನೇತೃತ್ವದಲ್ಲಿ ಅರಣಾಂತ ಉಪವಾಸ ಕೈಗೊಳ್ಳಲಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ಹಾಗೂ ಜಿಲ್ಲಾಧಿಕಾರಿಗಳು ನೀರು ಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಕೈ ಬಿಡಲಾಗಿತ್ತು. ಆದರೆ ಇಲ್ಲಿಯವರೆಗೂ ಭರವಸೆ ಈಡೇರದ ಹಿನ್ನೆಲೆಯಲ್ಲಿ ಇಂದಿನಿಂದ ಮತ್ತೆ ಅಮರಣಾಂತ ಉಪವಾಸ ಕೈಗೊಳ್ಳಲಾಗಿದೆ ಎಂದು ಸೊಗಡು ಶಿವಣ್ಣ ಅವರು ತಿಳಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ರೈತರ ಬಗ್ಗೆ ಬರೀ ಮಾತನಾಡುತ್ತಾರೆಯೇ ಹೊರತು ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಮಳೆ ಕೈ ಕೊಟ್ಟಿದ್ದು, ಅನ್ನದಾತರು ಹಾಗೂ ಜಾನುವಾರುಗಳಿಗೆ ನೀರಿಲ್ಲದೆ ಕಂಗಾಲಾಗಿದ್ದಾರೆ ಎಂದು ದೂರಿದ ಅವರು, ಕೂಡಲೇ ಹೇಮಾವತಿ ಹರಿಸದಿದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.  ಕೆ.ಪಿ.ಮಹೇಶ್, ನಂದೀಶ್ ಸೇರಿದಂತೆ ಹಲವಾರು ಕಾರ್ಯಕರ್ತರು , ಮಾಜಿ ಸಚಿವರ ಅಮರಣಾಂತ ಉಪವಾಸಕ್ಕೆ ಬೆಂಬಲ ಸೂಚಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin