ಎಲೆಕ್ಷನ್ ಪ್ಲಾನ್ ಮಾಡಲು ಒಂದೇ ದಿನ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ ಅಮಿತ್-ರಾಹುಲ್

ಈ ಸುದ್ದಿಯನ್ನು ಶೇರ್ ಮಾಡಿ

Amit-Shah--01

ಬೆಂಗಳೂರು, ಆ.1- ಕರ್ನಾಟಕ ರಾಜಕೀಯ ರಣರಂಗ ರಂಗೇರತೊಡಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‍ಷಾ, ಎಐಸಿಸಿ ಉಪಾಧ್ಯಕ್ಷ ರಾಹುಲ್‍ಗಾಂಧಿಯವರು ಒಂದೇ ದಿನ ರಾಜ್ಯಕ್ಕೆ ಆಗಮಿಸಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಆ.12 ರಂದು ಈ ಇಬ್ಬರು ನಾಯಕರು ರಾಜ್ಯಕ್ಕೆ ಆಗಮಿಸಲಿದ್ದಾರೆ. ಬೆಂಗಳೂರಿನಲ್ಲಿ ಅಮಿತ್‍ಷಾ ರಣತಂತ್ರ ರೂಪಿಸಲು ಮುಂದಾದರೆ, ರಾಯಚೂರಿನಲ್ಲಿ ರಾಹುಲ್‍ಗಾಂಧಿ ಮುಂಬರುವ ವಿಧಾನಸಭೆ ಚುನಾವಣೆಯ ರಣತಂತ್ರಕ್ಕೆ ಸಿದ್ಧತೆ ನಡೆಸಲಿದ್ದಾರೆ.

ಮೂರು ದಿನ ಬೆಂಗಳೂರಿನಲ್ಲೇ ಉಳಿಯಲಿರುವ ಅಮಿತ್ ಷಾ ಅವರು ಪಕ್ಷ ಸಂಘಟನೆ, ಅಭ್ಯರ್ಥಿಗಳ ಆಯ್ಕೆ, ಭಿನ್ನಾಭಿಪ್ರಾಯಗಳ ಪರಿಹಾರ ಸೇರಿದಂತೆ ಹಲವು ಮಹತ್ವದ ಚರ್ಚೆ ನಡೆಸಲಿದ್ದಾರೆ. ಬಿಜೆಪಿ ನಾಯಕರೊಂದಿಗೆ ಸಮಾಲೋಚನೆ ನಡೆಸುವ ಮೂಲಕ ಚುನಾವಣಾ ದಾಳ ಉರುಳಿಸಲಿದ್ದಾರೆ. ಎಐಸಿಸಿ ಉಪಾಧ್ಯಕ್ಷ ರಾಹುಲ್‍ಗಾಂಧಿ 12 ರಂದು ರಾಯಚೂರಿನಲ್ಲಿ ನಡೆಯಲಿರುವ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ನಡುವೆ ರಾಜ್ಯದಲ್ಲಿ ನಾಡಧ್ವಜಕ್ಕೆ ಮಾನ್ಯತೆ, ವೀರಶೈವ ಲಿಂಗಾಯತ ಸ್ವತಂತ್ರ ಧರ್ಮಕ್ಕೆ ಆಗ್ರಹ, ಹಿಂದಿ ಹೇರಿಕೆ ವಿರುದ್ಧ ಹೋರಾಟ ಮುಂತಾದವುಗಳು ತೀವ್ರವಾಗಿ ನಡೆಯುತ್ತಿದ್ದು, ಈ ಇಬ್ಬರು ನಾಯಕರು ಯಾವ ನಿಲುವು ತಳೆಯಲಿದ್ದಾರೆ ಕಾದುನೋಡಬೇಕು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin