ಕೈಗಾರಿಕಾ ಪ್ರದೇಶಗಳ ಮೂಲಭೂತ ಸೌಲಭ್ಯಕ್ಕೆ 5 ಕೋಟಿ ರೂ ಅನುದಾನ

ಈ ಸುದ್ದಿಯನ್ನು ಶೇರ್ ಮಾಡಿ

KJJeoge

ಬೆಂಗಳೂರು, ಆ.01- ಕೈಗಾರಿಕಾ ಪ್ರದೇಶಗಳ ಮೂಲಭೂತ ಸೌಕರ್ಯದ ಕೊರತೆ ನೀಗಿಸಿ ಅಭಿವೃದ್ಧಿ ಪಡಿಸಲು ಐದು ಕೋಟಿ ರೂ.ಗಳ ಅನುದಾನ ಬಿಡುಗಡೆಗೆ ಕ್ರಮ ವಹಿಸುವುದಾಗಿ ಬೆಂಗಳೂರು ಅಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಕೆ.ಜೆ.ಜಾರ್ಜ್ ಭರವಸೆ ನೀಡಿದ್ದಾರೆ. ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ ಕಾಸಿಯಾ ಬೆಂಗಳೂರು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಕುರಿತು ಹಮ್ಮಿಕೊಂಡಿದ್ದ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದರು.

ಸಣ್ಣ ಕೈಗಾರಿಕೆಗಳು ದೇಶದ ಬೆನ್ನೆಲುಬು ಉದ್ಯೋಗ ಸೃಷ್ಟಿ ಮತ್ತು ಗಾಂಧೀಜಿ ಅವರ ರಾಮರಾಜ್ಯದ ಕನಸ್ಸು ನನಸಾಗಲು ಅಭಿವೃದ್ಧಿಯೇ ಮೂಲಮಂತ್ರ. ಈ ನಿಟ್ಟಿನಲ್ಲಿ ಕೈಗಾರಿಕಾ ಪ್ರದೇಶ/ ಹೊಸಹತುಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಲು ಆದ್ಯತೆ ನೀಡಲಾಗುವುದು ಎಂದರು. ರಾಜ್ಯ ಸರ್ಕಾರ ಬೆಂಗಳೂರು ನಗರ ಅಭಿವೃದ್ಧಿಗೆ 7300 ಕೋಟಿ ರೂ ಬಿಡುಗಡೆ ಮಾಡಿದೆ. ನಗರೋತ್ಥಾನ ಅಭಿವೃದ್ಧಿಯಡಿ ವಿವಿಧ ಬಡಾವಣೆಗಳಲ್ಲಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಮುಂದಾಗಿದ್ದೇವೆ ಎಂದು ಶಾಸಕ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಕೆಎಸ್‍ಎಸ್‍ಐಡಿಸಿ ನಿರ್ದೇಶಕರಾದ ಕುಮಾರ್, ಗಂಗಾರಾಜು, ಪಾಲಿಕೆ ಸದಸ್ಯ ಮೋಹನ್ ಕುಮಾರ್, ಕಾಸಿಯಾ ಅಧ್ಯಕ್ಷ ಆರ್.ಹನುಮಂತೇಗೌಡ, ಉಪಾಧ್ಯಕ್ಷ ಬಸವರಾಜ್ ಎಸ್.ಜವಳಿ, ಗೌರವ ಪ್ರಧಾನ ಕಾರ್ಯದರ್ಶಿ ಟಿ.ಎಸ್.ಉಮಾಶಂಕರ್ ಉಪಸ್ಥಿತರಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin