ನಾಲ್ವರು ಕುಖ್ಯಾತ ಹೆದ್ದಾರಿ ದರೋಡೆಕೋರರ ಬಂಧನ

4-Arreste-01

ಹುಬ್ಬಳ್ಳಿ, ಆ.1-ಹೆದ್ದಾರಿಗಳಲ್ಲಿ ಲಾರಿಗಳನ್ನು ತಡೆದು ದರೋಡೆ ಮಾಡುತ್ತಿದ್ದ ನಾಲ್ವರು ಕುಖ್ಯಾತ ಹೆದ್ದಾರಿ ದರೋಡೆಕೋರರನ್ನು ಬಂಧಿಸುವಲ್ಲಿ ಹುಬ್ಬಳ್ಳಿಯ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ . ಯಲ್ಲಪ್ಪ , ಹನುಮಂತ, ಕುಮಾರ್ ಹಾಗೂ ಸಾಗರ್ ಬಂಧಿತ ಆರೋಪಿಗಳಾಗಿದ್ದು, ಇವರಿಂದ ನಾಲ್ಕು ಚಾಕು, ತಲ್ವಾರ್, ಖಾರದ ಪುಡಿ ಹಾಗು ಎರಡು ಬೈಕ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಗ್ಯಾಂಗ್ ಹುಬ್ಬಳ್ಳಿ ಸೊಲ್ಲಾಪುರ ಹೆದ್ದಾರಿಯಲ್ಲಿ ದರೋಡೆ ಮಾಡುತ್ತಿತ್ತು. ಹೆದ್ದಾರಿಯಲ್ಲಿ ಲಾರಿಗಳನ್ನು ಅಡ್ಡಗಟ್ಟಿ ದರೋಡೆ ಮಾಡಿ ಪರಾರಿಯಾಗುತ್ತಿದ್ದರು. ನಿನ್ನೆ ತಡರಾತ್ರಿ ದರೋಡೆಗೆ ಸಂಚು ರೂಪಿಸಿದಾಗ ಸಾರ್ವಜನಿಕರು ನೀಡಿದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಗ್ರಾಮೀಣ ಠಾಣೆ ಇನ್ಸ್‍ಪೆಕ್ಟರ್ ನವೀನ್ ಜಕ್ಕಲಿ ಮತ್ತು ಸಿಬ್ಬಂದಿ ಈ ನಾಲ್ವರನ್ನು ಬಂಧಿಸಿದ್ದಾರೆ. ಇನ್ನಿಬ್ಬರು ದರೋಡೆಕೋರರು ಪರಾರಿಯಾಗಿದ್ದು, ಅವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin