ಬಿಹಾರ ಸಿಎ ನಿತೀಶ್‍ಕುಮಾರ್‍ಗೆ ಎದುರಾಯ್ತು ಕಾನೂನಿನ ಸಂಕಷ್ಟ

ಈ ಸುದ್ದಿಯನ್ನು ಶೇರ್ ಮಾಡಿ

Nitish-Kuamr-01

ನವದೆಹಲಿ, ಆ.1- ಬಿಹಾರದ ಮುಖ್ಯಮಂತ್ರಿ ಹಾಗೂ ಜೆಡಿಯು ರಾಷ್ಟ್ರೀಯ ಅಧ್ಯಕ್ಷ ನಿತೀಶ್‍ಕುಮಾರ್‍ಗೆ ಕಾನೂನಿನ ಸಂಕಷ್ಟ ಎದುರಾಗಿದೆ. 1991ರಲ್ಲಿ ಕಾಂಗ್ರೆಸ್ ನಾಯಕ ಸೀತಾರಾಂಸಿಂಗ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ನಿತೀಶ್‍ಕುಮಾರ್ ಅವರ ವಿಧಾನಪರಿಷತ್ ಸದಸ್ಯತ್ವವನ್ನು ರದ್ದುಗೊಳಿಸಬೇಕೆಂದು ಸಲ್ಲಿಸಲಾಗಿದ್ದ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ. ನ್ಯಾಯಮೂರ್ತಿಗಳಾದ ದೀಪಕ್‍ಮಿಶ್ರ, ಅಮೀತವ ರಾಯ್ ಹಾಗೂ ಎ.ಎಂ.ಖನ್ವಿಲ್ಲಕರ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಅರ್ಜಿಯನ್ನು ವಿಚಾರಣೆ ನಡೆಸಲು ಸಮ್ಮತ್ತಿಸಿತು. ಇದರಿಂದಾಗಿ ನಿತೀಶ್‍ಗೆ ದೊಡ್ಡ ಗಂಡಾಂತರ ಎದುರಾಗಿದೆ.

1991ರಲ್ಲಿ ಬರ್ರಾ ಲೋಕಸಭಾ ಉಪಚುನಾವಣೆ ವೇಳೆ ಕಾಂಗ್ರೆಸ್‍ನ ಸ್ಥಳೀಯ ನಾಯಕ ಸೀತಾರಾಂ ಹಾಗೂ ಇತರೆ ನಾಲ್ಕು ಮಂದಿಯನ್ನು ಚುನಾವಣೆಗೂ ಮುನ್ನ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ನಿತೀಶ್‍ಕುಮಾರ್ ಕೂಡ ಭಾಗಿಯಾಗಿದ್ದಾರೆ ಎಂದು ವಕೀಲ ಎಂ.ಎಲ್.ಶರ್ಮ ಸುಪ್ರೀಂಕೋರ್ಟ್‍ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದರು. ನಿತೀಶ್‍ಕುಮಾರ್ ಓರ್ವ ಪ್ರಭಾವಿ ರಾಜಕಾರಣಿಯಾಗಿರುವುದರಿಂದ ಅವರ ವಿರುದ್ಧ ಎಫ್‍ಐಆರ್ ದಾಖಲಿಸಲು ಸಿಬಿಐಗೆ ನಿರ್ದೇಶನ ನೀಡಬೇಕೆಂದು ಎಂ.ಎಲ್.ಶರ್ಮ ಕೋರಿದ್ದರು.

ತಕ್ಷಣವೇ ಅರ್ಜಿಯನ್ನು ವಿಚಾರಣೆ ನಡೆಸಬೇಕೆಂಬ ಅರ್ಜಿದಾರರ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಲಿಲ್ಲ. ಅರ್ಜಿಯ ಪಟ್ಟಿಯಲ್ಲಿ ಇದು ಬಂದ ನಂತರ ಪರಿಗಣಿಸುತ್ತೇವೆ. ಕೂಡಲೇ ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ಸೂಚಿಸಿದ್ದರು. 2002ರಲ್ಲೇ ನಿತೀಶ್‍ಕುಮಾರ್ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಯೊಂದಿಗೆ ದಾಖಲಿಸಬೇಕೆಂದು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೆ. ಅಫಿಡೆವಿಟ್‍ನಲ್ಲಿ ತಮ್ಮ ಮೇಲೆ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆಯನ್ನು ದುರುದ್ದೇಶಪೂರ್ವಕವಾಗಿ ಮುಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ್ದರು.

ನಾನು ಬಿಹಾರಿ ಮುಖ್ಯಮಂತ್ರಿ ಆಗಿದ್ದರಿಂದ ಇದನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಇದು ಕೂಡ ಶಿಕ್ಷಾರ್ಹ ಅಪರಾಧವಾದ್ದರಿಂದ ತಕ್ಷಣವೇ ಅವರ ಮೇಲ್ಮನೆ ಸದಸ್ಯತ್ವವನ್ನು ರದ್ದುಪಡಿಸುವಂತೆ ನ್ಯಾಯಾಲಯದಲ್ಲಿ ಮಾನವಿ ಮಾಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin