ಬೆಂಗಳೂರಿನ ಜನತೆಯ ಸುರಕ್ಷತೆಗೆ ಮೊದಲ ಆದ್ಯತೆ

ಈ ಸುದ್ದಿಯನ್ನು ಶೇರ್ ಮಾಡಿ

Sunil-Kumar--01

ಬೆಂಗಳೂರು, ಆ.1- ನಗರದ ಜನತೆಯ ಸುರಕ್ಷತೆಗೆ ಮೊದಲ ಆದ್ಯತೆ ನೀಡುವುದಾಗಿ ನೂತನ ಪೊಲೀಸ್ ಕಮೀಷನರ್ ಟಿ.ಸುನೀಲ್ ಕುಮಾರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಮತ್ತು ಅಪರಾಧ ನಿಯಂತ್ರಣಕ್ಕೆ ಒತ್ತು ನೀಡಲಾಗುತ್ತದೆ. ತಪ್ಪು ಯಾರೇ ಮಾಡಲಿ ಅವರಿಗೆ ಶಿಕ್ಷೆಯಾಗಬೇಕು ಎಂದು ನುಡಿದರು. ಸಾರ್ವಜನಿಕರು ತಮ್ಮ ಯಾವುದೇ ದೂರುಗಳಿದ್ದಲ್ಲಿ ಕಚೇರಿಗೆ ಆಗಮಿಸಿ ತಮ್ಮನ್ನು ಮುಕ್ತವಾಗಿ ಭೇಟಿ ಮಾಡಬಹುದೆಂದು ಸುನೀಲ್‍ಕುಮಾರ್ ಅಭಯ ನೀಡಿದರು.

ನಗರದಲ್ಲಿ ರೌಡಿ ಚಟುವಟಿಕೆಗಳನ್ನು ತಡೆಗಟ್ಟಲಾಗುವುದು, ಯಾರೇ ಆಗಲಿ ರೌಡಿ ಚಟುವಟಿಕೆಯಲ್ಲಿ ತೊಡಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ಅವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಅವರು ಎಚ್ಚರಿಸಿದರು. ನಗರದಲ್ಲಿರುವ ಜನರ ಸುರಕ್ಷತೆಗೆ ಪ್ರಮುಖ ಆದ್ಯತೆ ನೀಡಲಾಗಿದ್ದು, ಪ್ರತಿಯೊಬ್ಬ ಪೊಲೀಸರೂ ಶ್ರಮಿಸುತ್ತಾರೆ ಎಂದು ಭರವಸೆ ನೀಡಿದ ಅವರು, ಈಗಿರುವ ಜನ ಸ್ನೇಹಿ ಕಾರ್ಯಕ್ರಮಗಳನ್ನು ಮುಂದುವರೆಸಲಾಗುತ್ತದೆ ಎಂದು ನುಡಿದರು.
ಅಕ್ರಮ ಭೂ ಅವ್ಯವಹಾರದಲ್ಲಿ ತೊಡಗುವವರ ವಿರುದ್ಧ ಮುಲಾಜಿಲ್ಲದೆ ಕ್ರಮಕೈಗೊಳ್ಳುವುದಾಗಿ ಎಚ್ಚರಿಸಿರುವ ಅವರು, ಸೈಬರ್ ಕ್ರೈಂ ನಿಯಂತ್ರಣಕ್ಕಾಗಿ ಸಿಬ್ಬಂದಿಗೆ ವಿಶೇಷ ತರಬೇತಿ ನೀಡಲಾಗುತ್ತದೆ. ಸಾರ್ವಜನಿಕರ ಸುರಕ್ಷತೆಯೇ ತಮ್ಮ ಧ್ಯೇಯ ಎಂದು ಸುನೀಲ್‍ಕುಮಾರ್ ತಿಳಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin