ಐಟಿ ದಾಳಿ ರಾಜಕೀಯ ಪ್ರೇರಿತ : ಪರಮೇಶ್ವರ್

Parameshwar--01

ಬೆಂಗಳೂರು, ಆ.2- ಸಚಿವ ಡಿ.ಕೆ.ಶಿವಕುಮಾರ್ ಅವರ ನಿವಾಸ ಹಾಗೂ ಆಪ್ತರ ಮೇಲೆ ನಡೆದ ಐಟಿ ದಾಳಿ ರಾಜಕೀಯ ಪ್ರೇರಿತವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಆರೋಪಿಸಿದ್ದಾರೆ. ಇಂದು ಬೆಳಗ್ಗೆ ಡಿಕೆಶಿ ನಿವಾಸದ ಮೇಲೆ ನಡೆದ ಐಟಿ ದಾಳಿ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಯಾವ ಕಾರಣಕ್ಕೆ ಐಟಿ ದಾಳಿ ನಡೆದಿದೆ ಎಂಬುದು ಮಾಹಿತಿ ಇಲ್ಲ. ಆದರೆ, ಈ ದಾಳಿ ರಾಜಕೀಯ ಪ್ರೇರಿತವಾಗಿರುವುದಂತೂ ಸತ್ಯ ಎಂದು ಹೇಳಿದರು.

ಗುಜರಾತ್ ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯನ್ನು ಸೋಲಿಸಲೇಬೇಕೆಂಬ ಪ್ರತೀಕಾರದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದು ಹೇಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin