ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಬಿಜೆಪಿಯಿಂದ ಹಿಂದೆಂದೂ ಕಂಡರಿಯದ ರಾಜಕೀಯ

Ahamad-Patel--01

ಬೆಂಗಳೂರು, ಆ.2-ಒಂದೇ ಒಂದು ರಾಜ್ಯಸಭಾ ಸ್ಥಾನವನ್ನು ಗೆಲ್ಲಲು ಬಿಜೆಪಿ ಹಿಂದೆಂದೂ ಕಂಡರಿಯದ ರಾಜಕೀಯ ಮಾಡುತ್ತಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಅಹಮದ್ ಪಟೇಲ್ ಪ್ರತಿಕ್ರಿಯೆ ನೀಡಿದ್ದಾರೆ. ಗುಜರಾತ್ ಕಾಂಗ್ರೆಸ್ ಶಾಸಕರು ನೆಲೆಸಿರುವ ಬೆಂಗಳೂರು ಹೊರವಲಯದ ಈಗಲ್ ಟನ್‍ಗಾಲ್ಫ ರೆಸಾರ್ಟ್ ಮೇಲೆ ಬುಧವಾರ ಬೆಳಗ್ಗೆ ಐಟಿ ದಾಳಿ ನಡೆದಿದೆ. ಕರ್ನಾಟಕದ ಪ್ರಭಾವಿ ಕಾಂಗ್ರೆಸï ಮುಖಂಡ, ಇಂಧನ ಸಚಿವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೂ ದಾಳಿ ಮಾಡಲಾಗಿದೆ. ಬಿಜೆಪಿ ಒಂದೇ ಒಂದು ರಾಜ್ಯಸಭೆ ಸ್ಥಾನವನ್ನು ಗೆಲ್ಲಲು ಹಿಂದೆ ಕಂಡರಿಯದ ರೀತಿಯ ರಾಜಕೀಯ ಮಾಡುತ್ತಿದೆ ಎಂದು ಅಹಮದ್ ಪಟೇಲ್ ಟ್ವೀಟ್ ಮಾಡಿದ್ದಾರೆ.

ರಾಜ್ಯಸಭೆ ಚುನಾವಣೆ ಹಿನ್ನಲೆಯಲ್ಲಿ ಗುಜರಾತ್ ಕಾಂಗ್ರೆಸ್ ಶಾಸಕರು ಬೆಂಗಳೂರು ಹೊರವಲಯದ ರೆಸಾರ್ಟ್‍ನಲ್ಲಿ ವಾಸ್ತವ್ಯ ಹೂಡಿದ್ದು, ರೆಸಾರ್ಟ್ ಮೇಲೆ ಇಂದು ಐಟಿ ದಾಳಿ ನಡೆದಿದೆ. ಕರ್ನಾಟಕದ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ಕನಕಪುರ ಮತ್ತು ಬೆಂಗಳೂರಿನ ಸದಾಶಿವನಗರದ ನಿವಾಸದ ಮೇಲೂ ಐಟಿ ದಾಳಿ ನಡೆಸಲಾಗಿದೆ. ಸುಮಾರು 20ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಈ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin