ಡಿಕೆಶಿ ಕಾನೂನುಬದ್ಧವಾಗಿದ್ದರೆ ಹೆದರುವ ಅವಶ್ಯಕತೆಯಿಲ್ಲ : ಶೆಟ್ಟರ್

Jagadish-Shettar-01

ಹುಬ್ಬಳ್ಳಿ, ಆ.2-ಐಟಿ ದಾಳಿಗೂ, ರಾಜಕೀಯಕ್ಕೂ ಸಂಬಂಧವಿಲ್ಲ. ಕಾನೂನುಬದ್ಧವಾಗಿದ್ದರೆ ಹೆದರುವ ಅವಶ್ಯಕತೆ ಇಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಇಂದಿಲ್ಲಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವ್ಯಾಪಾರಸ್ಥರ ಮನೆಗಳ ಮೇಲೆ ದಾಳಿ ನಡೆದರೆ ಚರ್ಚೆಯಾಗಲ್ಲ, ಆದರೆ ರಾಜಕಾರಣಿಗಳ ಮನೆ ಮೇಲೆ ದಾಳಿ ನಡೆದರೆ ಚರ್ಚೆಗೆ ಬರುತ್ತದೆ. ಕಾನೂನುಬದ್ಧವಾಗಿದ್ದರೆ ಐಟಿ ದಾಳಿಗೆ ಹೆದರುವ ಸಮಸ್ಯೆಯೇ ಇಲ್ಲ ಎಂದು ಹೇಳಿದರು.
ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ನಿವಾಸ ಸೇರಿದಂತೆ ವಿವಿಧೆಡೆ ಐಟಿ ದಾಳಿ ನಡೆದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ತಮಗೆ ಇಷ್ಟ ಬಂದಂತೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆದರೆ ಐಟಿ ದಾಳಿಗೂ, ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ವಾಣಿಜ್ಯ ಇಲಾಖೆ ಸ್ವಾಯತ್ತ ಸಂಸ್ಥೆಯಾಗಿದ್ದು, ದಾಳಿ ಮಾಡುವುದು ಅವರ ವಿವೇಚನೆಗೆ ಬಿಟ್ಟದ್ದು. ದಾಳಿ ಮಾಡಿದಾಗ ಹಣ ಸಿಗದಿದ್ದರೆ ಐಟಿ ಅಧಿಕಾರಿಗಳೇ ಜವಾಬ್ದಾರರಾಗುತ್ತಾರೆ ಎಂದು ಜಗದೀಶ್ ಶೆಟ್ಟರ್ ತಿಳಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOSb

Facebook Comments

Sri Raghav

Admin