ಡಿಕೆಶಿ ಮನೆ ಮೇಲೆ ಐಟಿ ರೆಡ್ : ಕೇಂದ್ರದ ಪಿತೂರಿ ಎಂದರು ಸಿಎಂ ಸಿದ್ದರಾಮಯ್ಯ

DK-Shivakumar-01

ಬೆಂಗಳೂರು, ಆ.2- ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಗುರಿಯಾಗಿರಿಸಿಕೊಂಡು ಆದಾಯ ತೆರಿಗೆ ಅಧಿಕಾರಿಗಳು ನಡೆಸುತ್ತಿರುವ ದಾಳಿ ಸಂಪೂರ್ಣ ರಾಜಕೀಯ ಪ್ರೇರಿತವಾಗಿದ್ದು, ಇದರ ಹಿಂದೆ ಕೇಂದ್ರ ಸರ್ಕಾರದ ಕೈವಾಡ ಇರುವುದು ಜಗತ್‍ಜಾಹೀರಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು. ರಾಜಕೀಯ ಷಡ್ಯಂತ್ರಕ್ಕೆ ಆದಾಯ ತೆರಿಗೆ ಇಲಾಖೆಯನ್ನು ಬಳಸಿಕೊಳ್ಳುವುದು ಕೇಂದ್ರ ಸರ್ಕಾರಕ್ಕೆ ಶೋಬೆ ತರುವುದಿಲ್ಲ. ಇಂತಹ ಬೆದರಿಕೆ ತಂತ್ರಗಳಿಗೆ ಬಗ್ಗುವುದಿಲ್ಲ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ದಾಳಿ ಸಂದರ್ಭದಲ್ಲಿ ನಿಯಮಾನುಸಾರ ಐಟಿ ಅಧಿಕಾರಿಗಳು ಸ್ಥಳೀಯ ಪೊಲೀಸರ ನೆರವು ಪಡೆದುಕೊಳ್ಳಬೇಕು. ಆದರೆ, ನಿಯಮ ಉಲ್ಲಂಘಿಸಿ ಸಿಆರ್‍ಪಿಎಫ್ ಸಿಬ್ಬಂದಿಯನ್ನು ಬಳಸಿಕೊಳ್ಳಲಾಗಿದೆ. ಐಟಿ ಅಧಿಕಾರಿಗಳು ನಿಯಮಾನುಸಾರ ದಾಳಿ ಮಾಡಿ ತನಿಖೆ ನಡೆಸಲಿ. ಇದರಿಂದ ಜನತೆಗೆ ಸತ್ಯ ತಿಳಿಯಲಿ. ಆದರೆ, ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಈ ರೀತಿಯ ದಾಳಿ ನಡೆಸಿದರೆ ಮುಂದೆ ಜನತೆ ತಕ್ಕ ಪಾಠ ಕಲಿಸುತ್ತಾರೆ ಎಂದರು. ತನ್ನ ವಿರುದ್ಧ ದನಿ ಎತ್ತುವವರ ಮೇಲೆ ಐಟಿ ದಾಳಿ ಬ್ರಹ್ಮಾಸ್ತ್ರ ಪ್ರಯೋಗ ಮಾಡುತ್ತಿದೆ. ಇದು ಪ್ರಜಾಪ್ರಭುತ್ವ ವಿರೋಧಿ ಧೋರಣೆ ಎಂದು ಸಿಎಂ ಗುಡುಗಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin