ಡಿ.ಕೆ.ಸುರೇಶ್ ಮಾಗಡಿಯಿಂದ ಸ್ಪರ್ಧಿಸಿದರೆ ಭವ್ಯ ಸ್ವಾಗತ

ಈ ಸುದ್ದಿಯನ್ನು ಶೇರ್ ಮಾಡಿ

ಮಾಗಡಿ, ಆ.2-ಕಾಂಗ್ರೆಸ್ ಪಕ್ಷದಿಂದ ಮಾಗಡಿ ವಿಧಾನಸಭಾ ಕ್ಷೇತ್ರಕ್ಕೆ ಸಂಸದ ಡಿ.ಕೆ.ಸುರೇಶ್ ಕಣಕ್ಕಿಳಿದರೆ ಭವ್ಯ ಸ್ವಾಗತ ನೀಡಲಾಗುವುದು ಎಂದು ಮಾಗಡಿ ಯೋಜನಾಪ್ರಾಧಿಕಾರದ ಅಧ್ಯಕ್ಷ ಕಾಂಗ್ರೆಸ್‍ನ ಎಂ.ಎನ್.ಮಂಜು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಹೈಕಮಾಂಡ್ ಸೂಚಿಸಿದರೆ ಸ್ಪರ್ಧಿಸಲು ಸಿದ್ದ ಎಂದು ಡಿ.ಕೆ.ಸುರೇಶ್ ಹೇಳಿಕೆ ನೀಡಿದ್ದಾರೆ. ಹೀಗಾಗಿ ಅವರನ್ನು ಮಾಗಡಿಯಿಂದ ಸ್ಪರ್ಧಿಸುವಂತೆ ನಾವು ಆಹ್ವಾನ ನೀಡುತ್ತೇವೆ ಎಂದರು.

ಸಂಸದ ಡಿ.ಕೆ.ಸುರೇಶ್ ಅವರು ಬೂತ್‍ಮಟ್ಟದ ಕಾರ್ಯಕರ್ತರೊಂದಿಗೂ ಸಂಪರ್ಕವಿಟ್ಟುಕೊಂಡಿದ್ದಾರೆ. ಅವರು ಯಾವುದೇ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದರೂ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಡಿ.ಕೆ.ಸುರೇಶ್ ಅಭ್ಯರ್ಥಿಯಾದರೆ ಕೆಪಿಸಿಸಿ ಸದಸ್ಯ ಎ.ಮಂಜು ಪಕ್ಷ ತ್ಯಜಿಸುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ. ಜೆಡಿಎಸ್ ಶಾಸಕ ಬಾಲಕೃಷ್ಣ ಇನ್ನೂ ಕಾಂಗ್ರೆಸ್‍ಗೆ ಸೇರ್ಪಡೆಯಾಗಿಲ್ಲ.ಅವರು ಬಿಜೆಪಿ ಸೇರಿದರೂ ಅಚ್ಚರಿಪಡುವಂತಿಲ್ಲ. ಹೀಗಾಗಿ ಡಿ.ಕೆ.ಸುರೇಶ್ ಅವರಿಗೆ ಮಾಗಡಿ ಕ್ಷೇತ್ರದಿಂದ ಸ್ಪರ್ಧಿಸಲು ಅನುವು ಮಾಡಿಕೊಡಬೇಕು ಎಂದು ಅವರು ಮನವಿ ಮಾಡಿಕೊಂಡರು.

ಬಾಲಕೃಷ್ಣ ಅವರು ಕಾಂಗ್ರೆಸ್ ಸೇರ್ಪಡೆಗೊಂಡರೂ ಎ.ಮಂಜು ಅವರಂತೆ ಡಿ.ಕೆ.ಸುರೇಶ್ ಅವರ ಗೆಲುವಿಗೆ ಸಹಕರಿಸಬೇಕು ಎಂದು ಕಿವಿಮಾತು ಹೇಳಿದರು.
ಮಾದಿಗೊಂಡನಹಳ್ಳಿ ತಾಪಂ ಸದಸ್ಯ ಹನುಮೇಗೌಡ,ಅಜ್ಜಹಳ್ಳಿ, ಗಂಗರಾಜು,ಪುರಸಭಾ ಸದಸ್ಯರಾದ ನರಸಿಂಹಮುರ್ತಿ,ಹೊಂಬಾಳಮ್ಮನಪೇಟೆ ರೇವಣ್ಣ,ಹೊಸಪೇಟೆ ನಾಗರಾಜು ಮತ್ತಿತರರು ಹಾಜರಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin