ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೈದಿ ಎಸ್ಕೇಪ್

Arrested-Man

ಬೆಂಗಳೂರು, ಆ.2- ಅನಾರೋಗ್ಯದಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೈದಿ ಆಸ್ಪತ್ರೆಯಿಂದ ಪರಾರಿಯಾಗಿದ್ದಾನೆ. ಶಿವಮೊಗ್ಗ ಮೂಲದ ಮಾಸ್ತಿಕುಮಾರ್ (35) ಪರಾರಿಯಾಗಿರುವ ಕೈದಿ. ಪತ್ನಿ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಮಾಸ್ತಿಕುಮಾರ್‍ನ ಆರೋಗ್ಯದಲ್ಲಿ ಏರುಪೇರಾದ ಕಾರಣ ಈತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಜು.29ರಂದು ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಈತ ರಾತ್ರಿ 8.30ರಿಂದ 9.30ರ ಮಧ್ಯೆ ವಾರ್ಡ್‍ನಿಂದ ಪರಾರಿಯಾಗಿದ್ದಾನೆ.

ಈ ವಿಷಯ ತಿಳಿದ ಕಾರಾಗೃಹದ ಅಧೀಕ್ಷಕರು ವಿವಿಪುರಂ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಮತ್ತು ಜೈಲು ಅಧಿಕಾರಿಗಳು ಕೈದಿ ಪತ್ತೆಗಾಗಿ ಶೋಧ ಕೈಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin