ಇಟ್ಟಿಗೆ ಕಾರ್ಖಾನೆ ಕಾರ್ಮಿಕ ನೇಣಿಗೆ ಶರಣು

ಈ ಸುದ್ದಿಯನ್ನು ಶೇರ್ ಮಾಡಿ

ಕೆ.ಆರ್.ಪೇಟೆ, ಆ.3- ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಬೂಕನಕೆರೆ ಹೋಬಳಿಯ ಬಿ.ಬಾಚಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕು ಹುಸ್ಕೂರು ಗ್ರಾಮದ ಸಂಜು (25) ಆತ್ಮಹತ್ಯೆಗೆ ಶರಣಾದ ಕೂಲಿ ಕಾರ್ಮಿಕ.

ಕಳೆದ ಎರಡು ವರ್ಷಗಳಿಂದ ಬಿ.ಬಾಚಹಳ್ಳಿ ಗ್ರಾಮದಲ್ಲಿರುವ ಇಟ್ಟಿಗೆ ಕಾರ್ಖಾನೆಯೊಂದರಲ್ಲಿ ಕಾರ್ಮಿಕನಾಗಿ ಸಂಜು ಕೆಲಸ ನಿರ್ವಹಿಸುತ್ತಿದ್ದನು. ಕಳೆದ ರಾತ್ರಿ ಎಲ್ಲರೂ ಮಲಗಿರುವಾಗ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾನೆ. ಆದರೆ ಪೋಷಕರು ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಮೇರೆಗೆ ಪ್ರಕರಣ ದಾಖಲಿಸಿರುವ ಗ್ರಾಮಾಂತರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Facebook Comments

Sri Raghav

Admin