ಈಗಲ್‍ಟನ್ ರೆಸಾರ್ಟ್‍ಗೆ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಭೇಟಿ

Zameer-Ahmed,-Balakrishna

ಬೆಂಗಳೂರು, ಆ.3- ಬಿಡದಿಯ ಈಗಲ್‍ಟನ್ ರೆಸಾರ್ಟ್‍ನಲ್ಲಿ ವಾಸ್ತವ್ಯ ಹೂಡಿರುವ ಗುಜರಾತ್ ಕಾಂಗ್ರೆಸ್ ಶಾಸಕರನ್ನು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ರೆಸಾರ್ಟ್ ನನ್ನ ಕ್ಷೇತ್ರವ್ಯಾಪ್ತಿಯಲ್ಲಿ ಬರುವುದರಿಂದ ನಾನು ರೆಸಾರ್ಟ್‍ಗೆ ಭೇಟಿ ನೀಡಿ ಶಾಸಕರೊಂದಿಗೆ ಮಾತು ಕತೆ ನಡೆಸಿದೆ. ಯಾರನ್ನೂ ಸ್ಥಳಾಂತರ ಮಾಡಿಲ್ಲ, ಯಾರೂ ಆತಂಕಕ್ಕೊಳಗಾಗಿಲ್ಲ. ಎಲ್ಲರೂ ಚೆನ್ನಾಗಿದ್ದಾರೆ ಎಂದು ಹೇಳಿದರು.

ಡಿ.ಕೆ.ಶಿವಕುಮಾರ್ ಅವರ ಬೆಂಬಲಿಗರು, ಆಪ್ತರ ಕಚೇರಿ, ನಿವಾಸಗಳ ಮೇಲೆ ನಡೆದ ಐಟಿ ದಾಳಿ ರಾಜಕೀಯ ಪ್ರೇರಿತವಾಗಿದೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡುವುದು ಸಾಮಾನ್ಯ. ಆದರೆ, ಗುಜರಾತ್ ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಆಪರೇಷನ್ ಕಮಲ ಭೀತಿಯಿಂದ ಅಲ್ಲಿಂದ ಕಾಂಗ್ರೆಸ್ ಶಾಸಕರು ಇಲ್ಲಿಗೆ ಬಂದಿದ್ದಾರೆ. ಹೈಕಮಾಂಡ್‍ನ ಆದೇಶದಂತೆ ಡಿ.ಕೆ.ಶಿವಕುಮಾರ್ ಅವರ ಉಸ್ತುವಾರಿ ಹೊಣೆ ಹೊತ್ತಿದ್ದಾರೆ. ಈ ಸಂದರ್ಭದಲ್ಲಿ ಐಟಿ ದಾಳಿ ನಡೆಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಬಾಲಕೃಷ್ಣ ಹೇಳಿದರು.

ಐಟಿ ದಾಳಿ ನಡೆಸಲು ನಮ್ಮದೇನೂ ಆಕ್ಷೇಪವಿಲ್ಲ. ಆದರೆ, ರಾಜಕೀಯ ದುರುದ್ದೇಶದಿಂದ ನಡೆಯುತ್ತಿರುವ ಐಟಿ ದಾಳಿ ಖಂಡನೀಯ. ಐಟಿಯವರು ಮನೆ ಮೇಲೆ ಬೇಕಾದರೆ ದಾಳಿ ಮಾಡಲಿ, ಈಗಲ್ ರೆಸಾರ್ಟ್ ಮೇಲೆ ಏಕೆ ದಾಳಿ ಮಾಡಬೇಕು ಎಂದು ಪ್ರಶ್ನಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin