ಗಡಿಯಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಮೂವರು ಯೋಧರು ಹುತಾತ್ಮ, ಇಬ್ಬರು ಉಗ್ರರ ಹತ್ಯೆ

Firing--01

ಶ್ರೀನಗರ, ಆ.3- ಕಾಶ್ಮೀರ ಕಣಿವೆಯಲ್ಲಿ ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕರ ಅಟ್ಟಹಾಸ ಮತ್ತಷ್ಟು ಹೆಚ್ಚಾಗಿದೆ. ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭದ್ರತಾ ಪಡೆಗಳ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಸೇನೆಯ ಮೇಜರ್ ಮತ್ತು ಇಬ್ಬರು ಯೋಧರು ಬಲಿಯಾಗಿದ್ದಾರೆ. ಗುಂಡಿನ ಕಾಳಗದಲ್ಲಿ ಕೆಲವು ಯೋಧರು ಗಾಯಗೊಂಡಿದ್ದಾರೆ. ಭಯೋತ್ಪಾದಕರು, ಅಡಗಿರುವ ಖಚಿತ ಮಾಹಿತಿ ಮೇರೆಗೆ ನಿನ್ನೆ ರಾತ್ರಿ ಯೋಧರು ಝೈಪೋರಾ ಮತ್ತು ಶೋಪಿಯಾನ್ ಜಿಲ್ಲೆಯ ತೀವ್ರ ಶೋಧ ನಡೆಸುತ್ತಿದ್ದರು.

ಇದೇ ಸಂದರ್ಭದಲ್ಲಿ ಉಗ್ರರು ಸೇನಾಪಡೆ ಮೇಲೆ ಗುಂಡಿನ ದಾಳಿ ನಡೆಸಿದಾಗ ಆರ್ಮಿ ಮೇಜರ್ ಸೇರಿದಂತೆ ಮೂವರು ಯೋಧರು ತೀವ್ರ ಗಾಯಗೊಂಡರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೇ ಮೇಕರ್ ಮತ್ತು ಇಬ್ಬರು ಯೋಧರು ಕೊನೆಯುಸಿರೆಳೆದರು ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ. ಗುಂಡಿನ ಚಕಮಕಿ ವೇಳೆ ಇನ್ನೂ ಕೆಲವು ಯೋಧರಿಗೆ ಗಾಯಗಳಾಗಿವೆ.
ಈ ಪ್ರದೇಶದಲ್ಲಿ ಅಡಗಿರುವ ಭಯೋತ್ಪಾದಕರನ್ನು ಸದೆಬಡಿಯುವ ಕಾರ್ಯಾಚರಣೆ ಮುಂದುವರಿದಿದೆ.

ಇಬ್ಬರು ಉಗ್ರರು ಬಲಿ:

ಮತ್ತೊಂದು ಪ್ರತ್ಯೇಕ ಪ್ರಕರಣದಲ್ಲಿ ಕುಲ್ಲಾಂ ಜಿಲ್ಲೆಯ ಗೋಪಾಲ್ ಪೂರಾದಲ್ಲಿ ನಡೆದ ಗುಮಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಕಳೆದ ಮೇನಲ್ಲಿ ಐವರು ಪೊಲಿಸರು ಮತ್ತು ಇಬ್ಬರು ಬ್ಯಾಂಕ್‍ಗಾರ್ಡ್‍ಗಳನ್ನು ಕೊಂದು, ಹಣವಿದ್ದ ವ್ಯಾನ್‍ನನ್ನು ಲೂಟಿ ಮಾಡಿದ್ದ ಕೃತ್ಯದಲ್ಲಿ ಈ ಉಗ್ರರು ಶಾಮೀಲಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಹತರಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದು ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin