ತಲೆ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯ ಕೊಲೆ

ಮೈಸೂರು, ಆ.3- ಕಾರು ವ್ಯವಹಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಲಷ್ಕರ್ ಮೊಹಲ್ಲ ವಾಸಿ ಜುಹೇಲ್ ಮಿರ್ಜ (24) ಕೊಲೆಗೀಡಾದ ವ್ಯಕ್ತಿ.  ಈತ ಗ್ರಾನೈಟ್ ಉದ್ಯಮದ ಜತೆಗೆ ಕಾರುಗಳನ್ನು ವ್ಯಾಪಾರ ಮಾಡುತ್ತಿದ್ದ ಎಂದು ತಿಳಿದುಬಂದಿದೆ.  ನಿನ್ನೆ ಮಧ್ಯರಾತ್ರಿ 12.30ರ ಸಮಯದಲ್ಲಿ ಮೂವರು ಜುಹೇಲ್ ಮಿರ್ಜಗೆ ಕರೆ ಮಾಡಿ ಕಾರು ಡೀಲಿಂಗ್ ಇದೆ. ಆಲನಹಳ್ಳಿಯ ಮಾನಸಿ ಬಡಾವಣೆಗೆ ಬಾ ಎಂದು ಕರೆಸಿಕೊಂಡಿದ್ದಾರೆ. ಈ ವೇಳೆ ಮಾತಿನ ಚಕಮಕಿ ನಡೆದು ಕೊನೆಗೆ ಆತನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ಗೊತ್ತಾಗಿದೆ.

ಇಂದು ಬೆಳಗ್ಗೆ ಸಾರ್ವಜನಿಕರು ರಸ್ತೆ ಬದಿ ಬಿದ್ದಿದ್ದ ವ್ಯಕ್ತಿಯ ದೇಹವನ್ನು ಕಂಡು ಪೊಲೀಸರಿಗೆ ತಿಳಿಸಿದ್ದಾರೆ.  ಸ್ಥಳಕ್ಕೆ ಆಲನಹಳ್ಳಿ ಠಾಣೆ ಇನ್ಸ್‍ಪೆಕ್ಟರ್ ಶೇಖರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin