ನೋಟಾ ಪ್ರಶ್ನಿಸಿ ಸುಪ್ರೀಂನಲ್ಲಿ ಕಾಂಗ್ರೆಸ್ ಸಲ್ಲಿಸಿದ್ದ ಮೇಲ್ಮನವಿ ವಜಾ

ಈ ಸುದ್ದಿಯನ್ನು ಶೇರ್ ಮಾಡಿ

NOTA--01

ನವದೆಹಲಿ, ಆ.3-ಗುಜರಾತ್ ರಾಜ್ಯಸಭೆ ಚುನಾವಣೆಯಲ್ಲಿ ನೋಟಾ( ಯಾರೊಬ್ಬರಿಗೂ ಮತವಿಲ್ಲ) ಪದ್ಧತಿಯನ್ನು ರದ್ದುಗೊಳಿಸುವಂತೆ ಕಾಂಗ್ರೆಸ್ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ.   ಇಂದು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‍ನ ನ್ಯಾಯಪೀಠ ಕಾಂಗ್ರೆಸ್‍ನ ಅರ್ಜಿಯನ್ನು ವಜಾಗೊಳಿಸಿ ರಾಜ್ಯಸಭೆ ಚುನಾವಣೆಯಲ್ಲಿ ನೋಟಾ ಬಳಕೆ ವ್ಯವಸ್ಥೆ ಮುಂದುವರೆಯಲಿದೆ ಎಂದು ಸ್ಪಷ್ಟಪಡಿಸಿತು.   ಇದರಿಂದ ಕಾಂಗ್ರೆಸ್‍ಗೆ ಭಾರೀ ಹಿನ್ನಡೆ ಉಂಟಾಗಿದೆ. ಇದೇ 8ರಂದು ಗುಜರಾತ್‍ನಲ್ಲಿ ನಡೆಯಲಿರುವ ರಾಜ್ಯಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ನೋಟಾ ಪದ್ಧತಿಯನ್ನು ಜಾರಿ ಮಾಡಿತ್ತು.

ಈ ಪದ್ಧತಿಯ ಪ್ರಕಾರ ಶಾಸಕರು ಮತದಾನದ ವೇಳೆ ಅಭ್ಯರ್ಥಿಗಳಿಗೆ ಮತವನ್ನು ಚಲಾಯಿಸದೆ ಇವಿಎಂನಲ್ಲಿರುವ ಪ್ರತ್ಯೇಕ ಬಟನ್ ಒತ್ತುವ ಮೂಲಕ ತಾವು ಮತ ಯಾರಿಗೂ ಹಾಕುವುದಿಲ್ಲ ಎಂಬುದೇ ನೋಟಾ ವ್ಯವಸ್ಥೆ.  ಗುಜರಾತ್ ರಾಜ್ಯಸಭೆಗೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ರಾಜಕೀಯ ಕಾರ್ಯದರ್ಶಿ ಅಹಮದ್ ಪಟೇಲ್ ಸ್ಪರ್ಧಿಸಿದ್ದಾರೆ. ಶತಾಯಗತಾಯ ಅವರನ್ನು ಸೋಲಿಸಲೇಬೇಕೆಂದು ಬಿಜೆಪಿ ಪಣ ತೊಟ್ಟಿದೆ. ಈಗಾಗಲೇ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ , ಕೇಂದ್ರ ಸಚಿವೆ ಸ್ಮೃತಿ ಇರಾನಿ ಸ್ಪರ್ಧಿಸಿದ್ದಾರೆ.

ಕಾಂಗ್ರೆಸ್‍ನಿಂದ ಬಂಡಾಯ ಅಭ್ಯರ್ಥಿಯಾಗಿ ವಿಧಾನಸಭೆಯ ಮುಖ್ಯ ಸಚೇತಕರೊಬ್ಬರು ಸ್ಪರ್ಧಿಸಿದ್ದಾರೆ. ಗುಜರಾತ್‍ನಲ್ಲಿ ವಿಧಾನಸಭೆಯಿಂದ ಮೂವರು ಅಭ್ಯರ್ಥಿಗಳನ್ನು ಮಾತ್ರ ಆಯ್ಕೆ ಮಾಡಲು ಅವಕಾಶವಿದೆ. ಇದೀಗ ನಾಲ್ಕನೆ ಅಭ್ಯರ್ಥಿ ಕಣಕ್ಕಿಳಿದಿರುವುದರಿಂದ ಚುನಾವಣಾ ಅಖಾಡ ರಂಗೇರತೊಡಗಿದೆ.
ಬಿಜೆಪಿ ತಮ್ಮ ಶಾಸಕರಿಗೆ ಆಪರೇಷನ್ ಕಮಲ ನಡೆಸುತ್ತಿದೆ ಎಂಬ ಕಾರಣಕ್ಕಾಗಿಯೇ ಶಾಸಕರನ್ನು ಬೆಂಗಳೂರಿನ ಈಗಲ್‍ಟನ್ ರೆಸಾರ್ಟ್‍ಗೆ ಕರೆತರಲಾಗಿದೆ.
ಈ ಬೆಳವಣಿಗೆಗಳ ನಡುವೆಯೇ ಕರ್ನಾಟಕದ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಅವರ ಸಹೋದರ ಸಂಬಂಧಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿರುವುದು ರಾಷ್ಟ್ರ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿದೆ.

ಆ.8ರಂದು ನಡೆಯುವ ಗುಜರಾತ್ ರಾಜ್ಯಸಭೆ ಚುನಾವಣೆ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿದೆ. ಎರಡು ದಿನಗಳ ಹಿಂದಷ್ಟೇ ಆಯೋಗ ನೋಟಾ ವ್ಯವಸ್ಥೆಗೆ ಅವಕಾಶ ಕಲ್ಪಿಸಿತ್ತು. ಇದೀಗ ಸುಪ್ರೀಂಕೋರ್ಟ್ ಕಾಂಗ್ರೆಸ್‍ನ ಮನವಿಯನ್ನು ತಿರಸ್ಕರಿಸಿರುವುದರಿಂದ ಯಾವ ಶಾಸಕರಾದರೂ ಅಡ್ಡಮತದಾನ ಮಾಡುವ ಬದಲು ನೋಟಾ ವ್ಯವಸ್ಥೆಯನ್ನು ಬಳಸಿಕೊಳ್ಳಬಹುದು.  ಹೀಗಾಗಿ ಅಹಮದ್ ಪಟೇಲ್ ಗೆಲ್ಲುವರೇ ಎಂಬ ಯಕ್ಷ ಪ್ರಶ್ನೆ ಎದುರಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin