ಮಹಾಮಸ್ತಾಭಿಷೇಕ : ಕಾಮಗಾರಿ ಪೂರ್ಣಗೊಳಿಸಲು ರೈಲ್ವೆ ಸಚಿವರಿಗೆ ಗೌಡರ ಪತ್ರ

ಈ ಸುದ್ದಿಯನ್ನು ಶೇರ್ ಮಾಡಿ

Devegowda

ಬೆಂಗಳೂರು,ಆ.3-ಶ್ರವಣಬೆಳಗೊಳದಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ ಬಾಹುಬಲಿ ಮಹಾಮಸ್ತಾಭಿಷೇಕದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆಯು ಆದ್ಯತಾನುಸಾರ ರೈಲು ಸಂಪರ್ಕ ಕಲ್ಪಿಸುವುದು ಸೇರಿದಂತೆ ಹಲವು ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿಕೊಡುವಂತೆ ಕೇಂದ್ರ ರೈಲ್ವೆ ಸಚಿವ ಸುರೇಶ್ ಪ್ರಭು ಅವರಿಗೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪತ್ರ ಬರೆದಿದ್ದಾರೆ. ಫೆಬ್ರವರಿಯಲ್ಲಿ ನಿರಂತರ 20 ದಿನಗಳು ನಡೆಯಲಿರುವ ಅಂತಾರಾಷ್ಟ್ರೀಯ ಮಟ್ಟದ ಬಾಹುಬಲಿ ಮಹಾಮಸ್ತಾಭಿಷೇಕದ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು, ಯಾತ್ರಾರ್ಥಿಗಳು ಆಗಮಿಸಲಿದ್ದಾರೆ. ಅವರ ಅನುಕೂಲಕ್ಕಾಗಿ ಶ್ರವಣ ಬೆಳಗೊಳದ ರೈಲ್ವೆ ನಿಲ್ದಾಣದಿಂದ ರಾಜ್ಯದ ಹುಬ್ಬಳ್ಳಿ , ಬೆಳಗಾವಿ ಸೇರಿದಂತೆ ಇತರೆ ರೈಲ್ವೆ ನಿಲ್ದಾಣಗಳ ನಡುವೆ ರೈಲು ಸಂಪರ್ಕ ಕಲ್ಪಿಸಬೇಕು ಎಂದು ಮನವರಿಕೆ ಮಾಡಿಕೊಟ್ಟಿದ್ದಾರೆ.

ಅಲ್ಲದೆ ಮುಂಬೈ, ಜೈಪುರ, ಗುವಾಹಟಿ, ಮೀರಜ್ ಸೇರಿದಂತೆ ಪ್ರಮುಖ ನಗರಗಳಿಂದಲೂ ಭಕ್ತಾಧಿಗಳು ಆಗಮಿಸಲಿದ್ದು ಅವರೆಲ್ಲರಿಗೂ ಅನಾನುಕೂಲವಾಗದಂತೆ ರೈಲ್ವೆ ಸೇವೆಯನ್ನು ಒದಗಿಸುವಂತೆ ಪತ್ರದಲ್ಲಿ ಕೋರಿದ್ದಾರೆ.  12 ವರ್ಷಕ್ಕೊಮ್ಮೆ ನಡೆಯಲಿರುವ ಮಹಾಮಸ್ತಾಭಿಷೇಕವು ಈ ಬಾರಿ ಫೆ.7ರಿಂದ 18ರವರೆಗೆ ಜರುಗಲಿದೆ. ಹೀಗಾಗಿ ಶ್ರವಣಬೆಳಗೊಳ ರೈಲ್ವೆ ನಿಲ್ದಾಣದಲ್ಲಿ ಸ್ವಾಗತಕಾರರು ಮತ್ತು ಮಾಹಿತಿ ಅಧಿಕಾರಿಗಳ ನೇಮಕ, ಹೆಚ್ಚುವರಿ ಟಿಕೆಟ್ ವಿತರಣಾ ಕೌಂಟರ್ ಸ್ಥಾಪನೆ, ಪ್ರಯಾಣಿಕರ ವಿಶ್ರಾಂತಿ ಕೊಠಡಿ ಹೆಚ್ಚಳ, ಫುಡ್‍ಫ್ಲಾಜಾ, ಶೌಚಾಲಯ, ಪಾರ್ಕಿಂಗ್ ಮತ್ತು ಭದ್ರತಾ ವ್ಯವಸ್ಥೆ , ವೈಫೈ ಮತ್ತು ವೈದ್ಯಕೀಯ ಸೇವೆ ಹಾಗೂ ಎಲ್‍ಇಡಿ ಪ್ರದರ್ಶನದ ಫಲಕ ಸೇರಿದಂತೆ ಹಲವು ಕಾಮಗಾರಿ ಮತ್ತು ಕೆಲಸಗಳನ್ನು ಕೈಗೊಳ್ಳಬೇಕಾಗಿದ್ದು , ತಮ್ಮ ಇಲಾಖಾ ಅಧಿಕಾರಿಗಳಿಗೆ ಆದ್ಯತೆ ಮೇರೆಗೆ ಕೆಲಸ ಪೂರೈಸಿಕೊಡುವಂತೆ ನಿರ್ದೇಶನ ನೀಡಬೇಕೆಂದು ಗೌಡರು ಪತ್ರದಲ್ಲಿ ವಿವರಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin