ಶಿಷ್ಟಾಚಾರ ಉಲ್ಲಂಘಿಸಿ ಡಿಕೆಶಿ ಮೇಲೆ ಐಟಿ ರೇಡ್ : ಕೇಂದ್ರಕ್ಕೆ ರಾಜ್ಯ ಸರ್ಕಾರ ಪತ್ರ

ಈ ಸುದ್ದಿಯನ್ನು ಶೇರ್ ಮಾಡಿ

DK-Shivakumar--01

ಬೆಂಗಳೂರು,ಆ.3-ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಅವರ ಸಹೋದರ ಸಂಬಂಧಿಗಳ ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದು , ಮುಂದೆ ಈ ರೀತಿ ಆಗದಂತೆ ಎಚ್ಚರ ವಹಿಸಬೇಕೆಂದು ರಾಜ್ಯ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದಿದೆ.
ಈ ಸಂಬಂಧ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸುಭಾಷ್‍ಚಂದ್ರ ಅವರು ಕೇಂದ್ರದ ಕಂದಾಯ ಇಲಾಖೆ ಕಾರ್ಯದರ್ಶಿ ಹಸ್‍ಮುಖ್ ಅಧಿಯಾಗೆ ಪತ್ರ ಬರೆದಿದ್ದು ಸಚಿವರ ಮೇಲೆ ನಡೆಸಿರುವ ದಾಳಿ ಶಿಷ್ಟಾಚಾರ ಉಲ್ಲಂಘನೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಯಾವುದೇ ಅಧಿಕಾರಿ, ಸಚಿವರು, ಶಾಸಕರು ಸೇರಿದಂತೆ ಜನಪ್ರತಿನಿಧಿಗಳ ಮೇಲೆ ದಾಳಿ ನಡೆಸುವ ವೇಳೆ ಕನಿಷ್ಟ ಸಂಬಂಧಪಟ್ಟವರಿಗೆ ಮಾಹಿತಿ ನೀಡಬೇಕು. ಬುಧವಾರ ಐಟಿ ಅಧಿಕಾರಿಗಳು ದಿಢೀರನೇ ನಡೆಸಿದ ದಾಳಿ ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಸುಭಾಷ್‍ಚಂದ್ರ ದೂರಿದ್ದಾರೆ.
ಐಟಿ ಅಧಿಕಾರಿಗಳು ದಾಳಿ ನಡೆಸುವ ವೇಳೆ ಸರ್ಕಾರಕ್ಕೆ ಮಾಹಿತಿ ನೀಡದಿದ್ದರೂ ಕಡೆ ಪಕ್ಷ ಪೊಲೀಸರಿಗಾದರೂ ನೀಡಬೇಕಿತ್ತು. ಇದ್ಯಾವುದೂ ಇಲ್ಲದೆ ಶಸ್ತ್ರ ಸಜ್ಜಿತ ಸಿಆರ್‍ಪಿಎಫ್ ಯೋಧರ ಮೂಲಕ ದಾಳಿ ನಡೆಸುವ ಅಗತ್ಯವಾದರೂ ಏನಿತ್ತು ಎಂದು ಪತ್ರದಲ್ಲಿ ಪ್ರಶ್ನಿಸಿದ್ದಾರೆ. ಈ ಹಿಂದೆ ದಾಳಿ ನಡೆದ ವೇಳೆ ಸಂಬಂಧಪಟ್ಟವರಿಗೆ ಮಾಹಿತಿ ನೀಡುವ ಸಂಪ್ರದಾಯವಿತ್ತು. ಆದರೆ ಈಗ ಐಟಿ ಅಧಿಕಾರಿಗಳು ಅತ್ಯಂತ ಗೌಪ್ಯವಾಗಿ ದಾಳಿ ನಡೆಸಿದ್ದಾರೆ. ಕರ್ನಾಟಕದ ಪೊಲೀಸರ ಬಗ್ಗೆ ಕೇಂದ್ರಕ್ಕೆ ಯಾವುದಾದರೂ ದುರದ್ದೇಶವಿತ್ತೇ?

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin